ಮೂಲೆಗದ್ದೆ ಶ್ರೀಗಳ ಅಶೀರ್ವಾದ ಪಡೆದ ಸಾಗರ ಕ್ಷೇತ್ರದ ಪಕ್ಷೇತ್ರರ ಅಭ್ಯರ್ಥಿ ಶಿವಕುಮಾರ್ ವಿ.ಪಾಟೀಲ್|election

ಮೂಲೆಗದ್ದೆ ಶ್ರೀಗಳ ಅಶೀರ್ವಾದ ಪಡೆದ  ಪಕ್ಷೇತ್ರರ ಅಭ್ಯರ್ಥಿ ಶಿವಕುಮಾರ್ ವಿ.ಪಾಟೀಲ್

ರಿಪ್ಪನ್‌ಪೇಟೆ;- ಮೇ 10 ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯ ಸಾಗರ-ಹೊಸನಗರ ಕ್ಷೇತ್ರದ ಪಕ್ಷೇತರ ಆಭ್ಯ್ಯರ್ಥಿ  ಶಿವಕುಮಾರ್ ವಿ.ಪಾಟೀಲ್  ಇಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸಾಗರ ಹೊಸನಗರ ತಾಲ್ಲೂಕ್‌ ವ್ಯಾಪ್ತಿಯಲ್ಲಿ ವೀರಶೈವ ಲಿಂಗಾಯ್ತಿ ಮತದಾರರು ಹೆಚ್ಚು ಇದ್ದರೂ ಕೂಡಾ ಯಾವುದೇ ರಾಷ್ಟ್ರೀಯ ಪಕ್ಷದವರು ನಮ್ಮ ಜನಾಂಗವನ್ನು ಗುರುತಿಸದೇ ನಿರ್ಲಕ್ಷಿö್ಯಸುತ್ತಾ ಬಂದಿದ್ದು ಬರೀ ನಮ್ಮ ಜನಾಂಗವನ್ನು ನಾವು ಮತಹಾಕಲು ಮಾತ್ರ ಬಳಸಿಕೊಳ್ಳುತ್ತಾರೆ ಹೊರತು ನಂತರ ಐದು ವರ್ಷಕ್ಕೆ ನೆನಪಾಗುತ್ತದೆ ಲಿಂಗಾಯಿತರಾಗಿದ್ದೇವೆ ಆ ಕಾರಣ ನಮ್ಮ ಜನಾಂಗದವರು ಸಂಘಟಿತರಾಗಿ ಕ್ಷೇತ್ರದಲ್ಲಿ ನಮ್ಮ ಪ್ರಾಬಲ್ಯವನ್ನು ಗುರುತಿಸಿಕೊಳ್ಳುವಂತಾಗಲು ನಾನು ಈ ಭಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೇಗೆ ಇಳಿದಿದ್ದೇನೆಂದು ಹೇಳಿದರು.

ಅಲ್ಲದೇ ಸಾಗರ ಹೊಸನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ದೇಶಕ್ಕೆ ಬೆಳಕು ನೀಡುವ ಉದ್ದೇಶದಿಂದ ಮನೆ ಮಠಗಳನ್ನು ಕಳೆದುಕೊಂಡ ಸಂತ್ರಸ್ತ ಕುಟುಂಬಗಳೇ ಹೆಚ್ಚಾಗಿರುವಾಗ ನಮ್ಮ ಮೂಲಭೂತ ಸೌಲಭ್ಯಗಳನ್ನು ನೀಡುವಲ್ಲಿ ಎಲ್ಲಾ ರಾಷ್ಟ್ರೀಯ ಪಕ್ಷಗಳು  ವಿಫಲಗೊಂಡಿವೆ ಎಂಬ ಕಾರಣ ನನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಸಾಕಷ್ಟು ವಿಚಾರಗಳನ್ನು ಇಟ್ಟುಕೊಂಡು ಮತದಾರರ ಮನೆ ಮನ ತಲುಪುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದಾಗಿ ಹೇಳಿ ಈ ಭಾರಿ ಪಕ್ಷೇತರ ಅಭ್ಯರ್ಥಿಗೆ ಹೆಚ್ಚು ಮತಹಾಕಿ ಬೆಂಬಲಿಸುವಂತೆ ಮನವಿ ಮಾಡಿದರು.

ಮಡೆನೂರು ಶರಾವತಿ ಚಕ್ರ ವರಾಹಿ ಹೀಗೆ ರಾಜ್ಯಕ್ಕೆ ಬೆಳಕು ನೀಡುವ ಉದ್ದೇಶದಿಂದಾಗಿ ಡ್ಯಾಮ್ ನಿರ್ಮಿಸುವ ಉದ್ದೇಶದಿಂದಾಗಿ ಮನೆ ಮಠಗಳನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಹಲವು ಕುಟುಂಬಗಳು ತಾಲ್ಲೂಕಿನ ಹಲವಡೆಯಲ್ಲಿ ವಾಸಿಸುತ್ತಿದ್ದರೂ ಕೂಡಾ ಕ್ಷೇತ್ರದ ಜನಪ್ರತಿನಿಧಿಗಳು ಅವರ ಸಮಸ್ಯಗಳನ್ನು ಪರಿಹರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ.ಆದ್ದರಿಂದಾಗಿ ನಾನು ಕ್ಷೇತ್ರದ ಮೂಲಭೂತ ಸಮಸ್ಯೆಗಳ ಪರಿಹಾರಕ್ಕಾಗಿ ಶಾಸನ ಸಭೆಯಲ್ಲಿ ಬೆಳಕು ಚಲ್ಲುವುದರೊಂದಿಗೆ ಶಾಶ್ವತ ಪರಿಹಾರ ಒದಗಿಸುವುದೇ ನನ್ನ ಮೊದಲ ಅಧ್ಯತೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ವೀರೂಪಾಕ್ಷಪ್ಪ,ಸುಪ್ರೀತ್, ವಿವೇಕ್, ಹರ್ಷ, ಶ್ರೀಧರ, ಶ್ರೀಕಾಂತ, ಅರುಣ್‌ಕುಮಾರ,
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

3 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago