ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿರುವ ಬಿ ವೈ ವಿಜಯೇಂದ್ರ ರ ಒಟ್ಟು ಆಸ್ತಿ ಎಷ್ಟು ಗೊತ್ತಾ???? ಪತ್ನಿಗೆ ಸಾಲ ಕೊಟ್ಟಿರುವ BYV ಗೆ ಸ್ವಂತ ಕಾರು ಇಲ್ಲ!!! ಈ ಸುದ್ದಿ ನೋಡಿ


ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉತ್ತರಾಧಿಕಾರಿಯಾಗಿ ಶಿಕಾರಿಪುರದಲ್ಲಿ ಕಣಕ್ಕಿಳಿದಿದ್ದಾರೆ. ಯಡಿಯೂರಪ್ಪ ಅವರು ಚುನಾವಣೆ ರಾಜಕೀಯದಿಂದ ಹಿಂದೆ ಸರಿದು ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಟ್ಟಿದ್ದಾರೆ. ಅದರಂತೆ ವಿಜಯೇಂದ್ರ ಅವರು ಶಿಕಾರಿಪುರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ತಮ್ಮ ಕುಟುಂಬದ ಆಸ್ತಿ ಎಷ್ಟು? ಅವರ ಬಳಿ ಏನೆಲ್ಲಾ ಇದೆ ಎನ್ನುವುದನ್ನು ವಿಜಯೇಂದ್ರ ಅವರು ನಾಮಿನೇಷನ್​ನಲ್ಲಿ ಮಾಹಿತಿ ನೀಡಿದ್ದಾರೆ.



 ಬಿವೈ ವಿಜಯೇಂದ್ರ ಮತ್ತು ಅವರ ಪತ್ನಿ ಪ್ರೇಮಾ ವಿಜಯೇಂದ್ರ ಒಟ್ಟು 126.18 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಆದರೆ, ದಂಪತಿಗೆ ಒಂದೇ ಒಂದು ಸ್ವಂತ ಕಾರು ಇಲ್ಲ.

47 ವರ್ಷದ ವಿಜಯೇಂದ್ರ ಅವರು 46.82 ಕೋಟಿ ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಅವರ ಪತ್ನಿ 7.85 ಕೋಟಿ ಮೌಲ್ಯದ ಚರಾಸ್ತಿಯ ಒಡತಿಯಾಗಿದ್ದಾರೆ. ಇನ್ನು ಈ ದಂಪತಿ ಬಳಿ ಪ್ರಸ್ತುತ 70.11 ಕೋಟಿ ರೂ ಮೌಲ್ಯದ ಸ್ಥಿರಾಸ್ತಿ ಇದೆ ಎಂದು ನಾಮಪತ್ರದ ಅಫಿಡವಿಟ್​ನಲ್ಲಿ ತಿಳಿಸಲಾಗಿದೆ.

ಇನ್ನು ವಿಜಯೇಂದ್ರ ಒಟ್ಟು 1.75 ಲಕ್ಷ ರೂ. ಮೌಲ್ಯದ ಟ್ರ್ಯಾಕ್ಟರ್ ಮತ್ತು ಟ್ರೇಲರ್ ಹೊಂದಿದ್ದಾರೆ. ದಂಪತಿ ಬಳಿ ಒಟ್ಟು 2.29 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ವಸ್ತುಗಳು ಇವೆ. ವಿಜಯೇಂದ್ರ ಅವರ ಬಳಿ 1.34 ಕೆಜಿ ಚಿನ್ನ ಇದ್ದರೆ, ಅವರ ಪತ್ನಿ 1.25 ಕೆಜಿ ಚಿನ್ನಾಭರಣಗಳನ್ನು ಹೊಂದಿದ್ದಾರೆ.

ಶಿಕಾರಿಪುರದಲ್ಲಿ ಕೃಷಿ ಭೂಮಿ, ದೊಡ್ಡಬಳ್ಳಾಪುರ, ರಾಮನಗರ, ಶಿಕಾರಿಪುರ, ಶಿವಮೊಗ್ಗ, ಕಲಬುರಗಿ ಮತ್ತು ಬೆಂಗಳೂರಿನಲ್ಲಿ ಕೃಷಿಯೇತರ ಭೂಮಿ ಹೊಂದಿದ್ದಾರೆ. ಹಾಗೇ ಏಳು ಮನೆಗಳ್ನು ಹೊಂದಿದ್ದಾರೆ. ಇನ್ನು ತಮ್ಮ ವಿರುದ್ಧ ಎರಡು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ ಎಂದು ಅಫಿಡವಿಟ್​ನಲ್ಲಿ ಘೋಷಿಸಿಕೊಂಡಿದ್ದಾರೆ. ಲಂಚ ಆರೋಪದ ಬಗ್ಗೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದ್ದರೆ, ಮತ್ತೊಂದು ಪ್ರಕರಣ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ್ದು ಎಂದು ತಿಳಿಸಿದ್ದಾರೆ.

ಶಿಕಾರಿಪುರ ಬಿ. ಎಸ್. ಯಡಿಯೂರಪ್ಪ ಅವರ ತವರು ಕ್ಷೇತ್ರ. ಒಟ್ಟು 9 ಬಾರಿ ಕ್ಷೇತ್ರದಲ್ಲಿ ಚುನಾವಣೆ ಎದುರಿಸಿರುವ ಅವರು 8 ಬಾರಿ ಗೆದ್ದಿದ್ದಾರೆ. 1999ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮಹಾಲಿಂಗಪ್ಪ ಎದುರು ಅವರು ಸೋಲು ಕಂಡಿದ್ದರು. ಇದೀಗ ಶಿಕಾರಿಪುರ ಕ್ಷೇತ್ರವನ್ನು ವಿಜಯೇಂದ್ರ ಅವರಗೆ ಬಿಟ್ಟು ಕೊಟ್ಟಿದ್ದು, ವಿಜಯೇಂದ್ರ ಅವರಿಗೆ ಇದು ಮೊದಲ ಚುನಾವಣೆಯಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

6 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

7 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

7 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago