ಶಿವಮೊಗ್ಗ – ಹೊಸಪೇಟೆ ರಾಜ್ಯ ಹೆದ್ದಾರಿಯಲ್ಲಿ ರಂಭಾಪುರಿ ಶ್ರೀಗಳಿದ್ದ ಕಾರಿಗೆ ಅಪಘಾತ ಸಂಭವಿಸಿದೆ.
ರಸ್ತೆ ಅಪಘಾತದಲ್ಲಿ ರಂಭಾಪುರಿ ಶ್ರೀಗಳು ಅಪಾಯದಿಂದ ಪಾರಾಗಿರುವ ಘಟನೆ ಹರಪನಹಳ್ಳಿ ತಾಲ್ಲೂಕಿನ ಚಿರಸ್ತಹಳ್ಳಿಯ ತಿರುವಿನಲ್ಲಿ ನಡೆದಿದೆ.
ರಂಭಾಪುರಿ ಶ್ರೀಗಳು ರಂಭಾಪುರಿ ಪೀಠದಿಂದ ಆಲಮಟ್ಟಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಶ್ರೀಗಳು ಶಿವಮೊಗ್ಗ- ಹೊಸಪೇಟೆ ರಾಜ್ಯ ಹೆದ್ದಾರಿ 25ರಲ್ಲಿ ಹರಿಹರದಿಂದ ಹರಪನಹಳ್ಳಿ ಮಾರ್ಗವಾಗಿ ಚಲಿಸುತ್ತಿದ್ದಾಗ ಶ್ರಿಗಳ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಶ್ರೀಗಳ ಕಾರಿನ ಮೇಲೆ ಹಾರಿ ಬಿದ್ದಿದ್ದಾರೆ.
ಈ ಅಪಘಾತ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಲಿಲ್ಲ. ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಹರಪನಹಳ್ಳಿ ತೆಗ್ಗಿನ ಮಠದ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿಗಳು ಭೇಟಿ ನೀಡಿದರು. ರಂಭಾಪುರಿ ಶ್ರೀಗಳನ್ನು ಹರಪನಹಳ್ಳಿಯ ತೆಗ್ಗಿನ ಮಠಕ್ಕೆ ಕರೆದುಕೊಂಡು ಹೋಗಿ ಉಪಚರಿಸಲಾಯಿತು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್