ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ನಡೆದಿದ್ದು, ಈ ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 
ತಳಲೆ ಗ್ರಾಮದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಕೋಡೂರು ಗ್ರಾಮದ ಚೂಡಾಮಣಿ ಮತ್ತು ಪತ್ನಿ ಮೋಹಿನಿ ಬೈಕ್ ನಲ್ಲಿ ತಳಲೆ ಕಡೆ ಹೋಗುತಿದ್ದಾಗ ಮೂಗೂಡ್ತಿಗೆ ಬರುತಿದ್ದ  ಮುತ್ತಿನಕೊಪ್ಪ ಗ್ರಾಮದ ಕೃಷ್ಣಮೂರ್ತಿ ಎಂಬುವವರ ಬೈಕ್ ಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದಾರೆ.
ಈ ಅಪಘಾತದಲ್ಲಿ ಮೋಹಿನಿ (45) ಹಾಗೂ ಕೃಷ್ಣಮೂರ್ತಿ (47) ರವರಿಗೆ ತಲೆಗೆ ಗಂಭೀರ ಗಾಯಗಳಾಗಿದ್ದು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಶಿವಮೊಗ್ಗ ಮೆಗ್ಗಾನ್ ಗೆ ರವಾನಿಸಲಾಗಿದೆ.
ಈ ಅಪಘಾತದ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗಿದೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
 
                         
                         
                         
                         
                         
                         
                         
                         
                         
                        