ಭಾರತದಲ್ಲಿ ನೋಟ್ ಬ್ಯಾನ್ ಆದ ನಂತರ ಜನ ಡಿಜಿಟಲ್ ಹಣಕಾಸಿನ ವ್ಯವಹಾರದ ಕಡೆ ಮುಖ ಮಾಡಿದರು. ಇದರಿಂದ ಜೀವನ ಒಂದು ಮಟ್ಟಕ್ಕೆ ಸುಧಾರಿಸಿತು ಎನ್ನುವಾಗಲೇ ಡಿಜಿಟಲ್ ಮೋಸಗಳು ಹೆಚ್ಚುತ್ತಿದ್ದು, ಹಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.
ಕೆವೈಸಿ ಅಪ್‌ಡೇಟ್ ಮಾಡಬೇಕು ಎಂದು ನಂಬಿಸಿ ಓಟಿಪಿ ನಂಬರ್ ಪಡೆದ ವ್ಯಕ್ತಿಯೊಬ್ಬರಿಗೆ ಸೈಬರ್ ಕಳ್ಳರು 1.80 ಲಕ್ಷ ರೂ. ವಂಚಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಚೌಡೇಶ್ವರಿ ಬೀದಿಯ ಸ್ವಾಮಿ (55) ವಂಚನೆಗೊಳಗಾದವರು.
ಏಪ್ರಿಲ್ 12 ರ ಬುಧವಾರ ಬ್ಯಾಂಕ್ ಸಿಬ್ಬಂದಿ ಸೋಗಿನಲ್ಲಿ ಸ್ವಾಮಿ ಯವರ ಮೊಬೈಲ್‌ಗೆ ಕರೆ ಮಾಡಿದ ಅಪರಿಚಿತರು, ನಿಮ್ಮ ಬ್ಯಾಂಕ್ ಖಾತೆಯ ಕೆವೈಸಿ ಅಪ್‌ಡೇಟ್ ಮಾಡಬೇಕಿದ್ದು, ಕೆಲವು ಮಾಹಿತಿ ನೀಡಬೇಕೆಂದು ಹೇಳಿದ್ದಾರೆ.
ಅದರಂತೆ ಜಿ ಎಂ ಸ್ವಾಮಿ ಅಪರಿಚಿತರು ಕೇಳಿದ ಮಾಹಿತಿ ನೀಡಿದ್ದಾರೆ ನಂತರ ನಿಮ್ಮ ಮೊಬೈಲ್‌ಗೆ ಬಂದಿರುವ ಓಟಿಪಿ ನಂಬರ್ ಹೇಳುವಂತೆ ಸೂಚಿಸಿದ್ದರು. ಸ್ವಾಮಿ ನಾಲ್ಕೈದು ಬಾರಿ ಓಟಿಪಿ ನಂಬರ್ ಹೇಳಿದ್ದರು.
ಅಷ್ಟರಲ್ಲಾಗಲೇ ಸ್ವಾಮಿ ರವರ ಖಾತೆಯಿಂದ ವಂಚಕನ ಖಾತೆಗೆ ಕ್ರಮವಾಗಿ 98.500 , 50000 ಮತ್ತು 32600 ರೂ ವರ್ಗಾವಣೆ ಆಗಿದೆ.
ಇದ್ಯಾವುದರ ಅರಿವೇ ಇಲ್ಲದ ಜಿ ಎಂ ಸ್ವಾಮಿ ಕೆಲ ಸಮಯದ ನಂತರ ಮೊಬೈಲ್ ಮೆಸೇಜ್ ನ್ನು ಗಮನಿಸಿದಾಗ ತನ್ನ ಖಾತೆಯಿಂದ ಹಣ ವರ್ಗಾವಣೆಯಾಗಿ ಮೋಸ ಹೋಗಿರುವ ಮಾಹಿತಿ ತಿಳಿದುಬಂದಿದೆ.
ಅಮಾಯಕ ಕೂಲಿ ಕಾರ್ಮಿಕರಾದ ಜಿ ಎಂ ಸ್ವಾಮಿ ಸೈಬರ್ ಕಳ್ಳರ ಕೈಚಳಕದಿಂದ ಮನೆ ಮಾರಿ ಹೊಂದಿಸಿಟ್ಟಿದ್ದ ಲಕ್ಷಾಂತರ ರೂ ವನ್ನು ಕಳೆದುಕೊಂಡಿದ್ದಾರೆ.
ಈ ಬಗ್ಗೆ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್