Headlines

ರಿಪ್ಪನ್‌ಪೇಟೆ ಕಾಲೇಜ್‌ಗೆ ಪಿಯು ಪರೀಕ್ಷೆಯಲ್ಲಿ 81.96% ರಷ್ಟು ಫಲಿತಾಂಶ

ರಿಪ್ಪನ್‌ಪೇಟೆ ಕಾಲೇಜ್‌ಗೆ ಪಿಯು ಪರೀಕ್ಷೆಯಲ್ಲಿ ಶೇಕಡಾ 81.96 ರಷ್ಟು ಫಲಿತಾಂಶ

ರಿಪ್ಪನ್‌ಪೇಟೆ : ಕಳೆದ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇಕಡಾ 81.96 ರಷ್ಟು ಫಲಿತಾಂಶ ಬಂದಿದೆ ಎಂದು ಕಾಲೇಜ್ ಪ್ರಾಚಾರ್ಯ ಎ.ಮಂಜುನಾಥ ತಿಳಿಸಿದರು.


ಕಾಲೇಜಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 244 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 200 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ.




ಕಲಾ ವಿಭಾಗದಲ್ಲಿ 101 ವಿದ್ಯಾರ್ಥಿಗಳಲ್ಲಿ 80 ವಿದ್ಯಾರ್ಥಿಗಳು ಉತ್ತೀರ್ಣಾರಾಗುವ ಮೂಲಕ ಶೇಕಡಾ 79.20 ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗದಲ್ಲಿ 82 ವಿದ್ಯಾರ್ಥಿಗಳಲ್ಲಿ 66 ವಿದ್ಯಾರ್ಥಿಗಳು ಉತ್ತೀರ್ಣಾರಾಗುವ ಮೂಲಕ ಶೇಕಡಾ 80-48 ರಷ್ಟು ಫಲಿತಾಂಶ.ವಿಜ್ಞಾನ ವಿಭಾಗದಲ್ಲಿ 61 ವಿದ್ಯಾರ್ಥಿಗಳಲ್ಲಿ 54 ವಿದ್ಯಾರ್ಥಿಗಳು ಉತ್ತೀರ್ಣಾರಾಗುವ ಮೂಲಕ ಶೇಕಡಾ 88.52 ರಷ್ಟು ಫಲಿತಾಂಶ ಬಂದಿದೆ ಎಂದರು

17 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ.101 ಪ್ರಥಮದರ್ಜೆಯಲ್ಲಿ,45 ವಿದ್ಯಾಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ 37 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣಾರಾಗುವ ಮೂಲಕ ಕಾಲೇಜ್‌ಗೆ ಕೀರ್ತಿ ತಂದಿದ್ದಾರೆAದು ಹೇಳಿ ವಿದ್ಯಾರ್ಥಿಗಳ ಈ ಸಾಧನೆಗೆ  ಪ್ರಾಚಾರ್ಯರು ಮತ್ತು ಉಪನ್ಯಾಸಕ ವೃಂದ ಸಿಡಿಸಿ ಯವರು ಆಭಿನಂದಿಸಿದರು.


ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ಶುಭಾಶಯವನ್ನು ಕೋರುತ್ತದೆ.



Leave a Reply

Your email address will not be published. Required fields are marked *