ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಚಂದಾಳದಿಂಬ ಗ್ರಾಮದಲ್ಲಿ ರೈತರೊಬ್ಬರ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಭಾರಿ ನಷ್ಟವಾಗಿರುವ ಘಟನೆ ನಡೆದಿದೆ.
ಚಂದಾಳದಿಂಬ ಸಮೀಪದ ಅಮಟೆಕೊಪ್ಪ ಗ್ರಾಮದ ಲಿಂಗಮೂರ್ತಿ ಗೌಡ ರವರ ಮನೆಯ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಶೇಖರಿಸಿಟ್ಟಿದ್ದ ಹಳೆಯ ನಾಟ ಮತ್ತು ಹುಲ್ಲು ಪಿಂಡಿಗಳು ಬೆಂಕಿಗೆ ಅಹುತಿಯಾಗಿದೆ.
ಬೆಂಕಿ ಹತ್ತಿದ ಮಾಹಿತಿ ಸಿಕ್ಕ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂಧಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರಿಂದಾಗಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಹೊಸನಗರ ಅಗ್ನಿಶಾಮಕ ದಳದ ಠಾಣಾಧಿಕಾರಿ. ಕೆ ಟಿ ರಾಜಪ್ಪ ಸಿಬ್ಬಂದಿಗಳಾದ ಎಲ್ ಎಫ಼್ ರಾಜೇಶ್ ,ಟಿ ಎಂ ಪ್ರವೀಣ್ ,ಎಫ಼್ ಡಿ ಶಿವರಾಜ್, ಎಫ಼್ ಎಂ ಮಂಜುನಾಥ್ ,ಚಿಕ್ಕಯ್ಯ ಮಠಪತಿ ಇದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್