ರಿಪ್ಪನ್ಪೇಟೆ : ಗ್ರಾಪಂ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ನಿಧನ
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ನಿವಾಸಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಖತೀಜಾಬಿ ರೆಹಮಾನ್ ವಯೋಸಹಜ ಮೃತಪಟ್ಟಿದ್ದಾರೆ.
ರಿಪ್ಪನ್ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದ ದಿವಂಗತ ಡಾ.ಅಬೂಬಕರ್ ರವರ ತಾಯಿಯಾದ ಖತೀಜಾಬಿ ರೆಹಮಾನ್ 2001 ರಲ್ಲಿ ಬರುವೆ 3 ವಾರ್ಡ್ ನ ಗ್ರಾಪಂ ಸದಸ್ಯರಾಗಿ ಆಯ್ಕೆಯಾಗಿ ಗ್ರಾಪಂ ಉಪಾಧ್ಯಕ್ಷರಾಗಿದ್ದರು.2003 ರಲ್ಲಿ ಜೆಡಿಎಸ್ ಪಕ್ಷದಿಂದ ತಾಲೂಕ್ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದರು.
ಮೃತರು ಏಳು ಜನ ಪುತ್ರರು ಹಾಗೂ ಐದು ಜನ ಪುತ್ರಿಯರನ್ನು ಅಗಲಿದ್ದಾರೆ.
ಮೃತರ ಅಂತಿಮ ದರ್ಶನಕ್ಕೆ ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದ ಅರ್ ಎ ಚಾಬುಸಾಬ್ ರವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಮೃತರ ಅಂತ್ಯಕ್ರಿಯೆಯು ಮಧ್ಯಾಹ್ನ ಪಟ್ಟಣದ ಸಾಗರ ರಸ್ತೆಯ ಖಬರ್ ಸ್ಥಾನ್ ನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್