ರಿಪ್ಪನ್‌ಪೇಟೆ – ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 116 ನೇ ಜನ್ಮ ದಿನಾಚರಣೆ

ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 116ನೇ ಜನ್ಮ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಆಚರಿಸಲಾಯಿತು‌.




ಪಟ್ಟಣದ ಹಿಂದೂ ಮಹಾಸಭಾ ವೇದಿಕೆಯಲ್ಲಿ ಪಟ್ಟಣದ ಡಾ.ಶಿವಕುಮಾರ ಸ್ವಾಮೀಜಿರವರ ಭಕ್ತ ವೃಂದ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮಿಜಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಆಶೀರ್ವಚನ ನೀಡಿ ಕಲಿಯುಗದ ನಡೆದಾಡುವ ದೇವರಾದ ಡಾ. ಶಿವಕುಮಾರ ಸ್ವಾಮೀಜಿ ಯವರು ಕೋಟ್ಯಾಂತರ ಮಂದಿಗೆ ತ್ರಿವಿಧ ದಾಸೋಹದ ಜೊತೆಯಲ್ಲೇ ಸಂಸ್ಕಾರದ ಶಿಕ್ಷಣದ ಧರ್ಮದ ಜ್ಞಾನದ ದೇವರಾಗಿದ್ದಾರೆ ಎಂದರು.

ಸಿದ್ಧಗಂಗಾ ಶ್ರೀಗಳು ಲಕ್ಷಾಂತರ ಮಕ್ಕಳಿಗೆ ಅನ್ನ, ಅಕ್ಷರ, ಜ್ಞಾನ ದಾಸೋಹ ನೀಡಿದ ಮಹಾಪುರುಷರು. ವಿದ್ಯೆ ಕಡಿಮೆ ಇದ್ದರೂ ಪರವಾಗಿಲ್ಲ ನಡತೆ ಶುದ್ಧವಾಗಿರಬೇಕೆಂಬ ಗುರುಗಳು ಆದೇಶ ಪ್ರಸ್ತುತ ಸಮಾಜಕ್ಕೆ ಬಹಳ ಅಗತ್ಯವಾಗಿದೆ. ಅಕ್ಷರ ಕಲಿತಿದ್ದೇವೆ, ಬಹಳ ಬುದ್ಧಿವಂತಿಕೆ ಇದೆ ಎಂಬ ಕಾರಣಕ್ಕೆ ಅಹಂ ಹೊಂದಿದರೆ, ಅದು ನಮ್ಮ ಸಾಧನೆಗೆ ಅಡ್ಡಿಯಾಗಲಿದೆ ಎಂಬ ವಿವೇಚನೆ ಇರಬೇಕು ಎಂದು ಸಿದ್ಧಗಂಗಾ ಶ್ರೀಗಳು ಹೇಳುತ್ತಿದ್ದ ಮಾತು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು.




ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಶಿವಕುಮಾರ ಸ್ವಾಮೀಜಿ‌ಭಕ್ತ ವೃಂದ ಸಮಿತಿ ಅಧ್ಯಕ್ಷರಾದ ಕಗ್ಗಲಿ ಲಿಂಗಪ್ಪ ವಹಿಸಿದ್ದರು.

ಈ ಸಂಧರ್ಭದಲ್ಲಿ ವೈದ್ಯಕೀಯ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಂಜುನಾಥ್ ರಾವ್ (ಕಿರಣ್ ಡಾಕ್ಟರ್) , ಮರಣಾ ನಂತರ ಅಂಗಾಗ ದಾನ ಮಾಡಿದ ಆರ್ಯನ್ ಪೋಷಕರಾದ ಆಶಾ ಮತ್ತು ಜಗನ್ನಾಥ್ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ತಿಮ್ಮಪ್ಪ ಸಿ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂಧರ್ಭದಲ್ಲಿ ಹೊಸನಗರ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಸಂಚಾಲಕರಾದ ಶಿವಮಣಿ ಅಕ್ಕ ,ಮುಖಂಡರಾದ ಸೋಮಶೇಖರ್ ,ಸತೀಶ್ ಹೆಗಡೆ ,ಸುಬ್ಬಯ್ಯಾಚಾರ್ ,ಶಾಂತಪ್ಪ ಹಾಗೂ ಇನ್ನಿತರರಿದ್ದರು.

ಗಣೇಶ್ ಕೆಂಚನಾಲ ಕಾರ್ಯಕ್ರಮವನ್ನು ನಿರೂಪಿಸಿದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

5 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

6 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

6 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago