ರಿಪ್ಪನ್ಪೇಟೆ : ಇಲ್ಲಿನ ನವೋದಯ ವಿವಿದ್ದೋದ್ದೇಶ ಸೌಹಾರ್ಧ ಬ್ಯಾಂಕ್ ನಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತಿದ್ದ ಮ್ಯಾನೇಜರ್ ಮಿಥುನ್ ವಿರುದ್ಧ ಬಟ್ಟೆಮಲ್ಲಪ್ಪ ನಿವಾಸಿ ಮಂಜುನಾಥ್ ಬ್ಯಾಣದ ಪೊಲೀಸ್ ಠಾಣೆಯಲ್ಲಿ ದಾಖಲಾತಿ ದುರುಪಯೋಗದ ವಿರುದ್ಧ ದೂರು ದಾಖಲಿಸಿದ್ದಾರೆ.
ಉದ್ದಮಿ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಮಂಜುನಾಥ್ ಬ್ಯಾಣದ ನವೋದಯ ವಿವಿದ್ದೋದ್ದೇಶ ಸೌಹಾರ್ಧ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು ಒಂದು ಲಕ್ಷ ರೂ ಎಫ್ ಡಿ ಇಟ್ಟು ತಮ್ಮ OD ಖಾತೆಯಲ್ಲಿ 1.5 ಲಕ್ಷ ರೂ.ಸಾಲ ಪಡೆದಿದ್ದರು.
2017 ರಲ್ಲಿ ಸಾಲ ಪಡೆದ ಬ್ಯಾಣದ ರವರು ಕೊರೋನ ವೇಳೆ ಸಾಲ ತೀರಿಸಲು ಕಷ್ಟವಾಗಿತ್ತು. ಹಿಂದಿನ ಮ್ಯಾನಜರ್ ಅವರ ಚೆಕ್ ಮತ್ತು ಬರೆದುಕೊಟ್ಟಿದ್ದ ಪತ್ರಗಳನ್ನ ದುರುಪಯೋಗ ಪಡಿಸಿಕೊಂಡು ಅವರ ಓಡಿ ಸಾಲವನ್ನ 2.5 ಗೆ ಹೆಚ್ಚಿಸಿದ್ದು ಇವರ ದಾಖಲಾತಿಗಳನ್ನ ದುರುಪಯೋಗ ಪಡಿಸಿಕೊಂಡಿರುವುದಾಗಿ ಬ್ಯಾಣದ್ ಎಫ್ಐಆರ್ ನಲ್ಲಿ ಆರೋಪಿಸಿದ್ದಾರೆ.
ಸಾಲ ಪಡೆಯುವಾಗ ಬ್ಯಾಂಕ್ ನಲ್ಲಿಟ್ಟಿದ್ದ ದಾಖಲಾತಿಯನ್ನ ವಾಪಾಸ್ ಕೇಳಿದರೂ ಈಗಿನ ಮ್ಯಾನೇಜರ್ ಕೊಡುವಲ್ಲಿ ವಿಫಲರಾಗಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ನಲ್ಲಿದ್ದ ಇವರ ಪತ್ನಿ ಹೆಸರಿನಲ್ಲಿರುವ ಚೆಕ್ ನ್ನ ಬೌನ್ಸ್ ಮಾಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್