ರಿಪ್ಪನ್‌ಪೇಟೆ : ಪದವಿ‌ ಕಾಲೇಜಿನ ಆವರಣದಲ್ಲಿ ಜೇನು ದಾಳಿ – ಹಲವು ವಿದ್ಯಾರ್ಥಿಗಳಿಗೆ ಗಾಯ|Bee attack

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪದವಿ ಕಾಲೇಜು ಅವರಣದಲ್ಲಿ ಜೇನುನೊಣಗಳು ದಾಳಿ ಮಾಡಿದ್ದರಿಂದ ಸುಮಾರು 13 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.




ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ಇಂದು ಬೆಳಿಗ್ಗೆ ಜೇನುಹುಳುಗಳು ದಾಳಿ ಮಾಡಿದ್ದರಿಂದ 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿರದಿದ್ದರೂ, ಅವರಲ್ಲಿ ಹಲವರಿಗೆ ಜೇನುನೊಣಗಳು ಕುಟುಕಿದ ಜಾಗದ ಸುತ್ತಲೂ ಭಾರಿ ಊತ ಕಂಡುಬಂದಿದೆ.

ಆಗಿದ್ದೇನು?

ಕಳೆದೊಂದು ತಿಂಗಳಿನಿಂದ ಕಾಲೇಜಿಗೆ ರಜೆ ನೀಡಲಾಗಿತ್ತು ಇಂದು ಎಲ್ಲಾ ತರಗತಿಗಳು ಏಕಕಾಲದಲ್ಲಿ ಆರಂಭವಾಗಿತ್ತು.ತರಗತಿಗಳು ಪ್ರಾರಂಭವಾಗುತಿದ್ದಂತೆ ಏಕಾಏಕಿ ಜೇನು ಹುಳಗಳು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದೆ.


ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯ!!!!?????

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಪದವಿ ಕಾಲೇಜಿನ ಎರಡನೆ ಮಹಡಿಯಲ್ಲಿ ಜೇನು ಹುಳಗಳು ಕಳೆದ ಐದಾರು ವರ್ಷಗಳಿಂದ ಗೂಡು ಕಟ್ಟಿಕೊಂಡಿದ್ದರು ಅದನ್ನು ತೆರವುಗೊಳಿಸುವ ಸುದ್ದಿಗೆ ಯಾರು ಹೋಗದೇ ಇರುವುದು ಆಶ್ಚರ್ಯಕರ..!! ವಿದ್ಯಾರ್ಥಿಗಳು ಪ್ರತಿನಿತ್ಯ ಆತಂಕದಲ್ಲೆ ಎರಡನೇ ಮಹಡಿಯಲ್ಲಿ ಓಡಾಡುತಿದ್ದರೂ ಕಾಲೇಜಿನ ಸಿಬ್ಬಂದಿಗಳಾಗಲಿ ,ಆಡಳಿತ ಮಂಡಳಿಯವರಾಗಲಿ ತಲೆಕೆಡಿಸಿಕೊಳ್ಳದೇ ಕುಳಿತಿದ್ದೇ ಇಂದಿನ ಈ ಘಟನೆಗೆ ಪ್ರಮುಖ ಕಾರಣವಾಗಿದೆ ಎಂದು ಹೆಸರು ಹೇಳಲಿಚ್ಚಿಸದ ವಿದ್ಯಾರ್ಥಿಯೊಬ್ಬ ತನ್ನ ಅಳಲು ತೋಡಿಕೊಳ್ಳುತ್ತಾನೆ.




ಇನ್ನಾದರೂ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿರುವ ಜೇನು ಹುಳಗಳ ಗೂಡನ್ನು ತೆರವುಗೊಳಿಸಿ ಭಯಮುಕ್ತ ಕಾಲೇಜು‌ ಕ್ಯಾಂಪಸ್ ನಿರ್ಮಿಸುತ್ತಾರೋ‌ಕಾದು ನೋಡಬೇಕಾಗಿದೆ.





ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

51 minutes ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

15 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

15 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

22 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago