ರಿಪ್ಪನ್‌ಪೇಟೆ – ಮತದಾನ ಪ್ರಕ್ರಿಯೆ ಕುರಿತು ಜಾಗೃತಿಗಾಗಿ ಈ ಸ್ವೀಪ್ ಬಸ್ ಸಂಚಾರ|election

ರಿಪ್ಪನ್‌ಪೇಟೆ :  ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತಿದ್ದು ಮತದಾರರಲ್ಲಿ ಇವಿಎಂ/ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸಿ, ಮತದಾನ ಪ್ರಮಾಣ ಹೆಚ್ಚಿಸುವುದು ಈ ಸ್ವೀಪ್ ಎಕ್ಸ್‌ಪ್ರೆಸ್ ಬಸ್ ಸಂಚಾರದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಐಈಸಿ ಸಮಾಲೋಚನಾಧಿಕಾರಿ ಗಣೇಶ್ ತಿಳಿಸಿದರು.




ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಮತ್ತು ಶಿವಮೊಗ್ಗ ಸ್ವೀಪ್ ಸಮಿತಿ ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿ ಕಾರ್ಯಕ್ರಮದ ಕುರಿತು ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸ್ವೀಪ್ ಎಕ್ಸ್‌ಪ್ರೆಸ್ ಒಳಗೆ ಮಾದರಿ ಮತದಾನ ಜಾಗೃತಿ ಕೇಂದ್ರ ಮತದಾನ ಕೇಂದ್ರಗಳಲ್ಲಿನ ಮೂಲಭೂತ ಸೌಲಭ್ಯಗಳ ಇವಿಎಂ ವಿವಿಪ್ಯಾಟ್ ಪ್ರತಿಕೃತಿಗಳು ಹಾಗೂ ಮತದಾನ ಜಾಗೃತಿ ಬಿತ್ತಿ ಚಿತ್ರಗಳಿವೆ. ಬಸ್ ಹೊರ ಭಾಗದಲ್ಲಿ ಸಿ-ವಿಜಿಲ್ ಆ್ಯಪ್ 1950 ಟೋಲ್ ಫ್ರೀ ಕುರಿತು ಮಾಹಿತಿ ಇದೆ.




ಬಸ್ ನಿಲ್ದಾಣ ಮತ್ತು ಅಟೋ ನಿಲ್ದಾಣದಲ್ಲಿನ ಸಾರ್ವಜನಿಕರು ಸ್ವೀಪ್ ಎಕ್ಸ್‌ಪ್ರೆಸ್‌ನಲ್ಲಿನ ಬಸ್ ಒಳಗಿನ ಮತದಾನ ಕೇಂದ್ರದಲ್ಲಿ ಕುಳಿತು ಪರಿವೀಕ್ಷಿಸಿದರು.

ಈ ಸಂದರ್ಭದಲ್ಲಿ ಗ್ರಾಮಪಂಚಾಯ್ತಿ ಪಿಡಿಓ ಚಂದ್ರಶೇಖರ್,ಗ್ರಾಪಂ ಸದಸ್ಯ ಪ್ರಕಾಶ್ ಪಾಲೇಕರ್ ಸಿಬ್ಬಂದಿಗಳಾದ ನಾಗೇಶ್ ಮೋರೆ, ರಾಜೇಶ್, ಇನ್ನಿತರರು ಹಾಜರಿದ್ದರು.






ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

3 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

3 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

3 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago