ರಿಪ್ಪನ್‌ಪೇಟೆ : ಸಿದ್ದಪ್ಪನಗುಡಿ ಬಳಿ ಅಕ್ರಮ ಮದ್ಯ ವಶ – ವಾಹನ ಸಮೇತ ಓರ್ವನ ಬಂಧನ|excise

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ರಿಪ್ಪನ್‌ಪೇಟೆಯ ಸಿದ್ದಪ್ಪನಗುಡಿ ಬಳಿ ಅಬಕಾರಿ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ಅಕ್ರಮ ಮದ್ಯವನ್ನು(liquor) ವಶಕ್ಕೆ ತೆಗೆದುಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.




ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಸರ್ಕಲ್ ನಲ್ಲಿ ಅಬಕಾರಿ ಅಧಿಕಾರಿಗಳು ರಸ್ತೆಗಾವಲು ನಡೆಸುತ್ತಿರುವಾಗ ಅಕ್ರಮವಾಗಿ ಬೈಕ್ ನಲ್ಲಿ ಸುಮಾರು 25.92 ಲೀಟರ್ ಮದ್ಯವನ್ನು ಸಾಗಾಟ ನಡೆಸುತ್ತಿದ್ದು  ಅಕ್ರಮ ಮದ್ಯ,ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಯನ್ನು ಬಂಧಿಸಿದ್ದಾರೆ.




ಆಯುಕ್ತರು ಮಂಗಳೂರು ವಿಭಾಗ ರವರ ನಿರ್ದೇಶನದಲ್ಲಿ ಹಾಗೂ ಮಾನ್ಯ ಅಬಕಾರಿ ಉಪ ಆಯುಕ್ತರು ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ಹಾಗೂ ಅಬಕಾರಿ ಉಪ ಅಧೀಕ್ಷಕರು ಹೊಸನಗರ ಉಪವಿಭಾಗ ಹೊಸನಗರ ರವರ ಹಾಗು ಅಬಕಾರಿ ನಿರೀಕ್ಷಕರು ಹೊಸನಗರ ವಲಯ ಹೊಸನಗರ ರವರ ಮಾರ್ಗದರ್ಶನದಲ್ಲಿ ರಿಪ್ಪನಪೇಟೆ -ಶಿವಮೊಗ್ಗ ಮುಖ್ಯ ರಸ್ತೆಯ ಸಿದ್ದಪ್ಪನಗುಡಿ ಗುಡಿ  ಕ್ರಾಸ್ ನಲ್ಲಿ ರಸ್ತೆಗಾವಲು ನಡೆಸಿ ವಾಹನ ತಪಾಸಣೆ ಮಾಡುತ್ತಿರುವಾಗ ಹೀರೋ ಹೋಂಡಾ ಗ್ಲಾಮರ್ ದ್ವಿಚಕ್ರ ವಾಹನ(K A 15 L 4425)ದಲ್ಲಿ ಒಬ್ಬ ವ್ಯಕ್ತಿಯು ಅಕ್ರಮವಾಗಿ 25.92 ಲೀಟರ್ ಮಧ್ಯವನ್ನು ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆ  ಹಚ್ಚಿ ದ್ವಿಚಕ್ರವಾಹನ ಸಮೇತ ಮುದ್ದೆಮಾಲನ್ನು ಜಪ್ತುಪಡಿಸಿ ಘೋರ ಪ್ರಕರಣ ದಾಖಲಿಸಲಾಗಿದೆ ಆರೋಪಿಯನ್ನು ನ್ಯಾಯಾಲಯ ಬಂಧನಕ್ಕೆ ಒಪ್ಪಿಸಲಾಗಿದೆ

ವಶಪಡಿಸಿಕೊಂಡಿರುವ ಮದ್ಯ ಮತ್ತು ವಾಹನ ಒಟ್ಟು ಮೌಲ್ಯ 71000 ರೂ‌. ಆಗಿದ್ದು ದಾಳಿಯಲ್ಲಿ ಅಬಕಾರಿ ಕಾನ್ಸ್‌ಟೇಬಲ್ ಮಲ್ಲಿಕ್ ಕೆ.ಜಿ, ರಾಕೇಶ್ ಎಂ.ಕೆ, ಶಕೀಲ್ ಅಹಮದ್, ವಾಹನ ಚಾಲಕ ಅಮಿತ್ ಬಿ.ಕೆ ಮತ್ತು ಪ್ರಸನ್ನರವರು ಪಾಲ್ಗೊಂಡಿದ್ದರು.






ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

54 minutes ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

23 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago