ರಿಪ್ಪನ್‌ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ
ರಿಪ್ಪನ್‌ಪೇಟೆ : ಸಾರ್ವಜನಿಕ ಸಭೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಪ್ರಾದೇಶಿಕ ಪಕ್ಷದ ಅಭ್ಯರ್ಥಿ ಗೆ ಚುನಾವಣಾಧಿಕಾರಿ ಅಗೌರವ ತೋರಿದ ಘಟನೆ ಇಂದು ನಡೆದಿದೆ.
ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಪಕ್ಷದ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಆಭ್ಯರ್ಥಿ ಅಬ್ಬಿ ಕಿರಣ್ ಬಿ.ಈ. ಪರ ಕೆ.ಆರ್.ಎಸ್.ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್.ಹೆಚ್.ಲಿಂಗೇಗೌಡ ಬಹಿರಂಗ ಸಭೆಯ ಮೂಲಕ ಮತಯಾಚನೆ ಮಾಡುತಿದ್ದ ಸಂಧರ್ಭದಲ್ಲಿ ಸ್ಥಳೀಯ ಚುನಾವಣಾ ನೋಡಲ್ ಅಧಿಕಾರಿ ಏಕಾಏಕಿ ಬಂದು ಸಭೆ ಮೊಟಕುಗೊಳಿಸಿ ವಾಹನದಿಂದ ಕೆಳಗಿಳಿಯುವಂತೆ ಏಕವಚನದಲ್ಲಿ ಅಭ್ಯರ್ಥಿ ಮತ್ತು ರಾಜ್ಯ ಉಪಾಧ್ಯಕ್ಷರಿಗೆ ತಾಕೀತು ಮಾಡಿದರು.
ಇದರಿಂದ ಸಿಡಿಮಿಡಿಗೊಂಡ ರಾಜ್ಯ ಉಪಾಧ್ಯಕ್ಷ ಎಸ್ ಹೆಚ್ ಲಿಂಗೇಗೌಡ ರಾಷ್ಟ್ರೀಯ ಪಕ್ಷಗಳ ಮುಂದೆ ತೋರದ ದರ್ಪ,ಭಾಷಾ ಬಳಕೆ ಪ್ರಾದೇಶಿಕ ಪಕ್ಷಗಳ ಮೇಲೆ ಏಕೆ ತೋರುತ್ತೀರಿ,ಚುನಾವಣಾ ನೀತಿ ಸಂಹಿತೆ ಬಗ್ಗೆ ನಿಮಗಿಂತ ಕೆ ಆರ್ ಎಸ್ ಪಕ್ಷಕ್ಕೆ ಹೆಚ್ಚಿನ ಅರಿವಿದೆ, ಚುನಾವಣೆಗೆ ಸ್ಪರ್ಧಿಸಿರುವ ಎಲ್ಲಾ ಅಭ್ಯರ್ಥಿಗಳನ್ನು ಒಂದೇ ರೂಪದಲ್ಲಿ ಕಾಣಬೇಕು ಜನ ಆಶೀರ್ವಾದ ಮಾಡಿದರೇ ಅವರು ಶಾಸಕರಾಗಿ ಆಯ್ಕೆಯಾಗುತ್ತಾರೆ ಎನ್ನುವ ಅರಿವಿರಲಿ,ನನಗೆ ರಾಜ್ಯ ವ್ಯಾಪ್ತಿಯಲ್ಲಿ ಓಡಾಡಲು ಸಂಪೂರ್ಣವಾಗಿ ಚುನಾವಣಾ ಅಯೋಗವೇ ಅನುಮತಿ ನೀಡಿರುವಾಗ ಅದರ ಅಗತ್ಯತೆ ಕಾಣುವುದಿಲ್ಲ ಏಕವಚನದಲ್ಲಿ ಯಾವುದಾದರೂ ರಾಷ್ಟ್ರೀಯ ಪಕ್ಷದ ನಾಯಕರನ್ನು ಹೀಗೆ ಆಸಭ್ಯವಾಗಿ ಕರೆಯುತ್ತಿರಾ ಎಂದು ತರಾಟೆಗೆ ತಗೆದುಕೊಳ್ಳುತ್ತಿದ್ದಂತೆ ಅಧಿಕಾರಿ ತಬ್ಬಿಬ್ಬಾದರು.
ನಂತರ ಪ್ರಚಾರ ಸಭೆಯಲ್ಲಿ ಮಾತನಾಡಿ ಸತ್ಯ ನ್ಯಾಯ ನಿಷ್ಟೆಯ ತತ್ವದಡಿಯಲ್ಲಿ ರಾಜ್ಯದಲ್ಲಿ ಸಂಪೂರ್ಣ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವ ಸಂಕಲ್ಪದೊಂದಿಗೆ ನಮ್ಮ ಕೆ.ಆರ್.ಎಸ್.ಪಕ್ಷ ಈ ಭಾರಿಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ವ್ಯಾಪ್ತಿಯಲ್ಲಿ 190 ಕ್ಷೇತ್ರದಲ್ಲಿ ಆಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದು ನಮ್ಮ ಪಕ್ಷದ ಪರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
ನಮ್ಮ ಪಕ್ಷದ ದ್ಯೇಯ ದೋರಣೆಗಳಲ್ಲಿ ಸತ್ಯ ನ್ಯಾಯ ನಿಷ್ಟೆಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದ್ದು ಸರ್ಕಾರಿ ಕಛೇರಿಗಳಲ್ಲಿ ಮತ್ತು ಪೊಲೀಸ್ ಠಾಣೆಯಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ಮುಕ್ತಗೊಳಿಸುವುದರ ಬಗ್ಗೆ ಸಾಕಷ್ಟು ಕ್ರಮ ಜರುಗಿಸಿಲಾಗಿರುವ ಏಕೈಕ ಪಕ್ಷ ಎಂದರೆ ಅದು ಕೆ.ಆರ್.ಎಸ್.ಪಕ್ಷ ಎಂದರು.
ಈ ಸಂದರ್ಭದಲ್ಲಿ ಕೆ.ಆರ್.ಎಸ್.ಪಕ್ಷದ ಸಾಗರ ಕ್ಷೇತ್ರದ ಅಭ್ಯರ್ಥಿ ಅಬ್ಬಿ ಕಿರಣ್ KRS ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್