ಶಿವಮೊಗ್ಗ : ಬಾರಿ ಬಿಸಿಲಿನಿಂದಾಗಿ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆಯಾಗುತ್ತಿದೆ . ಗುಡುಗು ಸಹಿತ ಮಳೆ ಸುರಿಯುತ್ತಿರುವುದರಿಂದ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಗಾಳಿ, ಗುಡುಗು ಸಹಿತ ಜೋರಾಗಿ ಮಳೆಯ ಸುರಿಯಲು ಆರಂಭವಾಗಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ.ಇನ್ನು ಭದ್ರಾವತಿ ಯಲ್ಲೂ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.
ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಾಗುತ್ತಿದ್ದಂತೆ ಖುಷಿಯಾದರು. ದಿಢೀರ್ ಮಳೆಯಿಂದಾಗಿ ಜನರು ಅಂಗಡಿಗಳು, ಕಟ್ಟಡಗಳ ಮುಂದೆ ನಿಲ್ಲಬೇಕಾಯಿತು.
ಕಳೆದ ಕೆಲವು ದಿನದಿಂದ ಭಾರಿ ಬಸಿಲಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕಾದ ಕಾವಲಿಯಂತಾಗಿತ್ತು. ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತ್ತು. ತೀವ್ರ ಶಕೆ, ಧಗೆಯಿಂದಾಗಿ ಜನರು ಹೈರಾಣಾಗಿದ್ದರು. ಹಲವು ಆರೋಗ್ಯ ಸಮಸ್ಯೆಗಳು ಉಂಟಾಗಿ ಆಸ್ಪತ್ರೆಗೆ ಅಲೆಯುವಂತಾಗಿತ್ತು. ಅಲ್ಲದೆ, ಶಕೆ, ದಾಹ ನೀಗಿಸಿಕೊಳ್ಳಲು ತಂಪು ಪಾನಿಯ, ಎಳನೀರು, ಏರ್ ಕೂಲರ್, ಫ್ಯಾನುಗಳ ಮೊರೆ ಹೋಗಿದ್ದರು. ಈಗ ಮಳೆ ಆಗಿರುವುದರಿಂದ ಶಿವಮೊಗ್ಗ, ಭದ್ರಾವತಿಯಲ್ಲಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದೆ.