ಸಾಗರ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪಗಿಂತ ಪತ್ನಿ ಯಶೋಧ ಶ್ರೀಮಂತೆ!!! ಆಸ್ತಿ ಎಷ್ಟು ಗೊತ್ತಾ ?|halappa

ಸಾಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹಾಲಪ್ಪ ಹರತಾಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಯಲ್ಲಿ ಹಾಲಪ್ಪನವರು ಚುನಾವಣಾ ಆಯೋಗಕ್ಕೆ ನೀಡಿದ ಆಸ್ತಿ ವಿವರದಲ್ಲಿ ಹಾಲಪ್ಪ ಅವರಿಗಿಂತ ಅವರ ಪತ್ನಿ ಯಶೋಧ ಅವರು ಹೆಚ್ಚು ಆಸ್ತಿ ಹೊಂದಿರುವುದಾಗಿ ತೋರಿಸಲಾಗಿದೆ. ಹಾಲಪ್ಪನವರು 2,75,11,577 ರೂ. ಮೌಲ್ಯದ ಸ್ಥಿರಾಸ್ತಿ ಹಾಗೂ ಚರಾಸ್ತಿ ಹೊಂದಿದ್ದಾರೆ. ಇವರ ಪತ್ನಿ ಯಶೋಧ ಅವರು 3,49,90,897 ರೂ. ಮೌಲ್ಯದ ಸ್ಥಿರಾಸ್ತಿ ಹಾಗೂ ಚರಾಸ್ತಿ ಹೊಂದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.




ಇನ್ನು, ಹಾಲಪ್ಪ ಅವರ ತಾಯಿಯವರು 67,91,324 ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಹಾಲಪ್ಪ ಬಳಿ 10 ಲಕ್ಷ ರೂ. ನಗದು, ಇವರ ಪತ್ನಿ ಬಳಿ 9.50 ಲಕ್ಷ ರೂ. ನಗದು ಹಾಗೂ ಇವರ ತಾಯಿಯ ಬಳಿ 2 ಲಕ್ಷ ರೂ. ನಗದು ಇದೆ. ಹಾಲಪ್ಪನವರ ಬ್ಯಾಂಕ್ ನಲ್ಲಿ 96,87,525 ಲಕ್ಷ ರೂ. ಠೇವಣಿ ಇದೆ. ಇವರ ಪತ್ನಿ ಬಳಿ 22,14,546 ಲಕ್ಷ ರೂ. ಠೇವಣಿ ಇದೆ. ಹಾಲಪ್ಪ ಹೆಸರಿನಲ್ಲಿ 63,500 ರೂ. ಮೌಲ್ಯದ ಷೇರು ಬಾಂಡ್ ಗಳಿವೆ. ಇವರ ಪತ್ನಿ ರವರ ಬಳಿ 58,25,711 ಲಕ್ಷ ರೂಪಾಯಿ ಮೌಲ್ಯದ ಷೇರುಗಳಿವೆ. ಇವರ ತಾಯಿ ಬಳಿ 1,500 ರೂ, ಷೇರು ಬಾಂಡ್ ಇದೆ ಎಂದು ಹೇಳಲಾಗಿದೆ. ಬೆಂಗಳೂರಿನ ವಾಸದ ಮನೆಗೆ 4 ಲಕ್ಷ ರೂ. ಮುಂಗಡ ಹಣ ನೀಡಿದ್ದಾರೆ. ಹಾಲಪ್ಪ ಹಾಗೂ ಯಶೋಧ ಅವರ ಬಳಿ ತಲಾ ಒಂದೊಂದು ಕಾರು ಇದೆ.




ಚಿನ್ನಾಭರಣ ವಿವರ :

ಹಾಲಪ್ಪ ಅವರ ಬಳಿ 200 ಗ್ರಾಂ ಚಿನ್ನಾಭರಣ ಇದೆ. ಪತ್ನಿ ಯಶೋಧ ಅವರ ಬಳಿ 1.180 ಗ್ರಾಂ ಚಿನ್ನಾಭರಣ ಜೊತೆಗೆ 5 ಕೆ.ಜಿ ಬೆಳ್ಳಿಯ ಪೂಜಾ ಸಾಮಗ್ರಿಗಳಿವೆ. ಇವರ ತಾಯಿಯ ಬಳಿ 890 ಗ್ರಾಂ ಚಿನ್ನಾಭರಣವಿದೆ ಎಂದು ಮಾಹಿತಿ ನೀಡಿದ್ದಾರೆ.

ಜಮೀನುಗಳ ವಿವರ :

ಹಾಲಪ್ಪನವರ ಹೆಸರಿನಲ್ಲಿ 61,35,000 ರೂ. ಮೌಲ್ಯದ ಕೃಷಿ ಭೂಮಿ ಇದೆ. ಪತ್ನಿ ಬಳಿ 8,25,000 ರೂ. ಮೌಲ್ಯದ ಕೃಷಿ ಭೂಮಿ ಇದೆ. ಇವರ ತಾಯಿಯ ಬಳಿ 2 ಲಕ್ಷ ರೂ. ಮೌಲ್ಯದ ಕೃಷಿ ಭೂಮಿ ಇದೆ. ಹಾಲಪ್ಪನವರ ಬಳಿ 3.45 ಕೋಟಿ ರೂ. ಮೌಲ್ಯದ ಕೃಷಿಯೇತರ ಭೂಮಿ ಇದೆ. ಇವರ ಪತ್ನಿ ಬಳಿ 1.20 ಕೋಟಿ ರೂ. ಮೌಲ್ಯದ ಕೃಷಿ ಭೂಮಿ ಇದೆ. ಹಾಲಪ್ಪನವರ ಬಳಿ 12 ಲಕ್ಷ ಮೌಲ್ಯದ ವಾಣಿಜ್ಯ ಕಟ್ಟಡ ಇದೆ. ಇವರ ಪತ್ನಿ ಹೆಸರಿನಲ್ಲಿ 44 ಲಕ್ಷ ರೂ. ಮೌಲ್ಯದ ವಾಣಿಜ್ಯ ಕಟ್ಟಡ ಇದೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

3 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

5 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

1 day ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago