ಸಾರ್ವಜನಿಕವಾಗಿ ಗನ್ ತೋರಿಸಿ ಬೆದರಿಕೆ ಹಾಕಿದ ಯುವಕ – ಪ್ರಕರಣ ದಾಖಲು|crime news

ಶಿವಮೊಗ್ಗ ನಗರ ದಲ್ಲಿ ವ್ಯಕ್ತಿಯೊಬ್ಬ ಗನ್​ ತೋರಿಸಿ ಬೆದರಿಕೆ ಹಾಕಿದ ಘಟನೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ.




ಸೆಕೆಂಡ್​ ಹ್ಯಾಂಡ್ ಬೈಕ್​ ಡೀಲರ್​ ಒಬ್ಬರಿಗೆ ಗನ್​ ತೋರಿಸಿದ ಯುವಕ ಅದರಿಂದಲೇ ಅವರ ಮೇಲೆ ಹಲ್ಲೆ ಸಹ ಮಾಡಿದ್ಧಾನಂತೆ. ನಗರದ ಇಲಿಯಾಸ್ ನಗರದ ಬಳಿಇರುವ ಶಾದಿ ಮಹಲ್​ ಬಳಿಯಲ್ಲಿ ಈ ಘಟನೆ ನಡೆದಿದೆ.

ನಡೆದಿದ್ದೇನು?

ಇಲಿಯಾಸ್ ನಗರದಲ್ಲಿ ಮೊಹಮ್ಮದ್ ರಿಯಾಮ್​ ಎಂಬವರು ಬೈಕ್ ಡೀಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರ ಬಳಿ ಅಜರ್ ಎಂಬಾತ ಬಂದಿದ್ದನಂತೆ. ಅಲ್ಲದೆ ಬೈಕ್​ವೊಂದನ್ನ ಖರೀದಿಸಿ, ಅದರ ೪೦ ಸಾವಿರ ರೂಪಾಯಿ ಹಣವನ್ನು ೨ ತಿಂಗಳು ಬಿಟ್ಟು ಕೊಡುವುದಾಗಿ ತಿಳಿಸಿದ್ದಾನೆ.




ಆದರೆ ಎರಡು ತಿಂಗಳು ಕಳೆದರು ಹಣ ಕೊಡದ ಹಿನ್ನೆಲೆಯಲ್ಲಿ ರಿಯಾಬ್​ ಕಳೆದ ಶನಿವಾರ, ಅಜರ್​ನನ್ನ ಕರೆಸಿಕೊಂಡು ಹಣ ಕೊಡು ಇಲ್ಲ ಬೈಕ್ ವಾಪಸ್ ಕೊಡು ಎಂದು ಪಟ್ಟು ಹಿಡಿದಿದ್ದಾರೆ. ಈ ವೇಳೇ ರಾಂಗ್​ ಆದ ಅಜರ್​, ಪೈಸ ಸಹ ಕೊಡುವುದಿಲ್ಲ , ಏನ್ ಮಾಡ್ತೀಯಾ ಮಾಡಿಕೋ ಎಂದು ಬೆದರಿಕೆ ಹಾಕಿದ್ದಾನೆ.

ಕೇವಲ ಬೆದರಿಕೆ ಹಾಕಿದ್ದಷ್ಟೆ ಅಲ್ಲದೆ ಅಜರ್​, ತನ್ನ ಬೆನ್ನ ಹಿಂದೆ ಸಿಗಿಸಿಕೊಂಡಿದ್ದ ಗನ್​ನನ್ನ ತೆಗೆದು ರಿಯಾಬ್​ಗೆ ಹೆದರಿಸಿದ್ದಾನೆ. ಆತನ ಕಿವಿಗೆ ಅದರಿಂದಲೇ ಹಲ್ಲೆ ಮಾಡಿ, ಶೂಟ್ ಮಾಡ್ತೀನಿ ಎಂದು ಬೆದರಿಸಿದ್ದಾನೆ.. ಅಷ್ಟೊತ್ತಿಗೆ ಅಲ್ಲಿಗೆ ಕೆಲವರು ಬರುವುದನ್ನ ಗಮನಿಸಿದ ಅಜರ್, ಗನ್​ ಸಮೇತ ಪರಾರಿಯಾಗಿದ್ಧಾನೆ.




ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ ಆಗಿದೆ. ಆದರೆ ಶಿವಮೊಗ್ಗ ಸಿಟಿಯಲ್ಲಿ ಗನ್​ ಬಳಸಲಾಗುತ್ತಿದೆ ಎಂದರೆ, ಆತನ ಹಿಂದಿನ ಉದ್ದೇಶ ಏನಿರಬಹುದು ಎಂಬುದು ಇದೀಗ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

7 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

7 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

8 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago