ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಹರತಾಳು ಹಾಲಪ್ಪ ರಿಗೆ ಮತ ನೀಡಿ ಬೆಂಬಲಿಸುವ ಮೂಲಕ ಸಾಗರ ಕ್ಷೇತ್ರದಿಂದ ಮಂತ್ರಿಯೊಬ್ಬರನ್ನು ಗೆಲ್ಲಿಸಲಿದ್ದೀರಿ ಎಂದು ಸಂಸದ ಬಿ ವೈ.ರಾಘವೇಂದ್ರ ಹೇಳಿದ್ದಾರೆ.
ಅವರು ಸಾಗರದಲ್ಲಿ ಹರತಾಳು ಹಾಲಪ್ಪನವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ, ಹಾಲಪ್ಪನವರು ಕಟ್ಟಕಡೆಯ ಮನುಷ್ಯನಿಗೆ ಸರ್ಕಾರದ ಕಾರ್ಯಕ್ರಮ ತಲುಪಿಸಿದವರು. ರೈತನ ಮೇಲೆ ಹಲ್ಲೆ ಆದಾಗ ರಾತ್ರಿ ಧರಣಿ ನಡೆಸಿದ್ದವರು,ಶೋಷಿತ ವರ್ಗಕ್ಕೆ ಅನ್ಯಾಯವಾದಗ ಸೆಟೆದು ನಿಂತ ನಾಯಕ ಹರತಾಳು ಹಾಲಪ್ಪ ರವರು ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿರಲಿದ್ದಾರೆ ಆದ್ದರಿಂದ ಸಾಗರ ಕ್ಷೇತ್ರದ ಜನತೆ ಅವರ ಕೈ ಹಿಡಿಯಬೇಕಾಗಿದೆ ಎಂದರು.
ನಾವು ಕಟ್ಟುವ ಹುತ್ತಕ್ಕೆ ಬೇರೆಯವರು ಬಂದು ವಾಸ ಮಾಡಲು ನಾವು ಬಿಡೊಲ್ಲ. ಕೊರೋನ ಸಂದರ್ಭದಲ್ಲಿ ಟೂರಿಸ್ಟ್ ಟೆಂಟ್ ಹಾಕಿದವರು ಇಂದು ಚುನಾವಣೆ ಅಭ್ಯರ್ಥಿಯಾಗಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಹೇಳದೆ ವಾಗ್ದಾಳಿ ನಡೆಸಿದರು.
ಕಾಗೋಡು ಪುತ್ರಿ ರಾಜ ನಂದಿನಿ ಬಿಜೆಪಿಗೆ ಸೇರಿದ್ದಾರೆ ಎಂದರೆ ಅದು ಬದಲಾವಣೆಯ ದಿಕ್ಕು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್