ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮಾರುತಿಪುರದ ಸುರೇಶ್ ಶೆಟ್ಟಿ ಎಂಬಾತನ ಮನೆಯ ಮೇಲೆ ಹೊಸನಗರ ಅಬಕಾರಿ ಇಲಾಖೆಯವರು ಖಚಿತ ಅಧಾರದ ಮೇಲೆ ದಾಳಿ ನಡೆಸಿ ಸುಮಾರು 64.75 ಲೀಟರ್ ಅಕ್ರಮವಾಗಿ ಮಾರಾಟ ಮಾಡುವ ಸಲುವಾಗಿ ಸಂಗ್ರಹಿಸಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಅಕ್ರಮ ಮದ್ಯದ ಬೆಲೆಯು 28,134 ರೂ.ಗಳಾಗಿದ್ದು ಸುರೇಶ್ಶೆಟ್ಟಿಯ ವಿರುದ್ದ ಕೇಸ್ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅಬಕಾರಿ ಆಯುಕ್ತರು ಬೆಂಗಳೂರು ಹಾಗೂ ನಾಗರಾಜಪ್ಪ ಟಿ ಅಬಕಾರಿ ಜಂಟಿ ಆಯುಕ್ತರು ಮಂಗಳೂರು ವಿಭಾಗರವರ ಮಾರ್ಗದರ್ಶನದಲ್ಲಿ ಕ್ಯಾಪ್ಟನ್ ಅಜಿತ್ ಕುಮಾರ್ ಅಬಕಾರಿ ಉಪ ಆಯುಕ್ತರು ಶಿವಮೊಗ್ಗ ಜಿಲ್ಲೆ ರವರ ನಿರ್ದೇಶನದಂತೆ ಹಾಗೂ ಶಿವ ಪ್ರಸಾದ್ ಅಬಕಾರಿ ಉಪ ಅಧೀಕ್ಷಕರು ತೀರ್ಥಹಳ್ಳಿ ರವರ ಆದೇಶದಂತೆ ಹೊಸನಗರದ ಅಬಕಾರಿ ನಿರೀಕ್ಷಕ ನಾಗರಾಜ್ರವರ ನೇತೃತ್ವದಲ್ಲಿ ದಾಳಿ ನಡೆದಿದೆ.
ಈ ದಾಳಿಯ ಸಂದರ್ಭದಲ್ಲಿ ಅಬಕಾರಿ ಇಲಾಖೆಯ ನಿರೀಕ್ಷಕರಾದ ನಾಗರಾಜ ಎ.ಜೆ, ಅಬಕಾರಿ ಇನ್ಸ್ಪೆಕ್ಟರ್ ವಾಸವಿ ಪಿ.ಎನ್, ಚುನಾವಣೆ ಅಧಿಕಾರಿ ತಹಶೀಲ್ದಾರ್ ಧರ್ಮಂತ ಗಂಗಾರಾಮ್ ಕೋರಿ, ಎಫ್ ಎಸ್ ತಂಡದ ರಮೇಶ್ ಕುಮಾರ್ ಆರ್, ಬಿ ಎಂ ರಾಜು ಶೆಟ್ಟಿ, ಪೊಲೀಸ್ ಕಾನ್ಸ್ಟೇಬಲ್ ಗೋಪಾಲ ಕೃಷ್ಣ ಹೆಚ್, ಅಬಕಾರಿ ಕಾನ್ಸ್ಟೇಬಲ್ ಗಳಾದ ರಾಘವೇಂದ್ರ ಕೆ, ಪ್ರಕಾಶ್, ಪಾಂಡು, ವಾಹನ ಚಾಲಕರಾದ ಉಮೇಶ್ ಮತ್ತು ಬಸವರಾಜ್ ಇನ್ನೂ ಉಪಸ್ಥಿತರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್