ಹೊಸನಗರ ತಾಲೂಕಿನ ಪಶು ಆಸ್ಪತ್ರೆಗಳು ವೈದ್ಯರು, ಸಿಬ್ಬಂದಿಗಳಿಲ್ಲದೇ ಭಣಗುಟ್ಟುತ್ತಿವೆ – 22 ಆಸ್ಪತ್ರೆಗೆ ಇಬ್ಬರೇ ವೈದ್ಯರು

ರಿಪ್ಪನ್‌ಪೇಟೆ : ಮಲೆನಾಡಿನ ಹೆಬ್ಬಾಗಿಲು ಎಂದೇ ಖ್ಯಾತಿಗಳಿಸಿರುವ ಶಿವಮೊಗ್ಗ ಜಿಲ್ಲೆಯ ಮಧ್ಯ ಮಲೆನಾಡಿನ ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ 22 ಪಶು ಅಸ್ಪತ್ರೆಗೆ 2 ಜನ ವೈದ್ಯಾಧಿಕಾರಿಗಳು ಬಿಟ್ಟರೆ ಇನ್ನೂ ಯಾರು ಇರುವುದಿಲ್ಲ ರಾಜಕಾರಣಿಗಳ ಇಚ್ಚಾ ಶಕ್ತಿಯ ಕೊರತೆಯಿಂದಾಗಿ  ತಾಲೂಕಿನಾದ್ಯಂತ ಭಣಗುಟ್ಟುತ್ತಿವೆ ಪಶ ಆಸ್ಪತ್ರೆಗಳು.




ರಾಜ್ಯ ಬಿಜೆಪಿ ಸರ್ಕಾರ ಹೈನುಗಾರಿಕೆಗೆ ಹೆಚ್ಚಿನ ಅಧ್ಯತೆ ನೀಡಲಾಗಿದೆ ಎಂದು ಹೇಳಿಕೊಳ್ಳುತ್ತಿದ್ದು ಹೊಸನಗರ ತಾಲ್ಲೂಕ್ ಮಾತ್ರ ಹೈನು ಉದ್ಯಮ ಸೇರಿದಂತೆ ಗೋವುಗಳ ಲಾಲನೆ ಪಾಲನೆ ರಾಜಕೀಯ ಮುಖಂಡರ ಇಚ್ಚಾಶಕ್ತಿಯ ಕೊರತೆಯಿಂದಾಗಿ ಹಿಂದುಳಿಯುವಂತಾಗಿದೆ.


ರಿಪ್ಪನ್‌ಪೇಟೆಯ ಸರ್ಕಾರಿ ಪಶು ಆಸ್ಪತ್ರೆಯಲ್ಲಿ ನಿತ್ಯ ಬಾಗಿಲು ತೆಗೆಯಲು, ಕಸ ಗುಡಿಸಲು ಸಹ ಡಿ.ಗ್ರೂಪ್ ನಿಂದ ಹಿಡಿದು ಎ ಗ್ರೂಪ್ ವರೆಗೂ ಯಾರು ಇಲ್ಲ………….!


ರಿಪ್ಪನ್‌ಪೇಟೆ ಆಸ್ಪತ್ರೆಯಲ್ಲಿ ವೈದ್ಯರು ಬಿಡಿ ಕಸ ಗುಡಿಸುವ ಡಿ ದರ್ಜೆಯ ನೌಕರನೂ ಇಲ್ಲಾ.. ಈ ಬಗ್ಗೆ ವಿಚಾರಿಸಿದರೆ ಅಧಿಕಾರಿಗಳು ಹಾರಿಕೆ ಉತ್ತರ ನೀಡಿ ಸಾಗಹಾಕುತ್ತಾರೆ.
ಹೊಸನಗರ ತಾಲ್ಲೂಕಿನ ಪಶು ಇಲಾಖೆಯ ಸಹಾಯಕ ನಿರ್ದೇಶಕರು ಇಲ್ಲ… ಇನ್ನೂ 22 ಪಶು ಅಸ್ಪತ್ರೆಯಲ್ಲಿ ಇಬ್ಬರು ಡಾಕ್ಟರ್ ಮತ್ತು 10 ಜನ ಇನ್ಸ್ಪೆಕ್ಟರ್ ಹಾಗೂ ಡಿ.ಗ್ರೂಪ್ ಸಿಬ್ಬಂದಿ ಬಿಟ್ಟರೆ ಉಳಿದಂತೆ ತಾಲ್ಲೂಕಿನ ವ್ಯಾಪ್ತಿಯಲ್ಲಿನ ಆಸ್ಪತ್ರೆಯಲ್ಲಿ ಯಾರೂ ಇಲ್ಲಾ..
ಹೊಸನಗರ ತಾಲೂಕಿನಲ್ಲಿ 80 ಜನ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿವರ್ಗ ಇರಬೇಕಾಗಿದೆ ಆದರೆ ಇರುವುದು ಮೂರು ಮತ್ತೊಂದು  ಸಿಬ್ಬಂದಿಗಳು… ಪಶು ಇಲಾಖೆಯ ಈ ಅವ್ಯವಸ್ಥೆ ರಾಜಕೀಯ ಮುಖಂಡರಿಗೆ ಮತ್ತು ಸಂಬಂಧಿಸಿದ ಆಧಿಕಾರಿಗಳ ಗಮನಕ್ಕೆ ಬರಲ್ಲಿಲ್ಲವೇ ಎಂಬ ಸಂಶಯ ಸಾರ್ವಜನಿಕರನ್ನು ಕಾಡುವಂತಾಗಿದೆ.




ತಾಲ್ಲೂಕ್ ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಲು ಬಾಯಿ ರೋಗದಂತಹ ಮಾರಕ ರೋಗಗಳು ಕಾಣಿಸಿಕೊಂಡು ಸಾಕಷ್ಟು ಜಾನುವಾರುಗಳು ಸಾವನ್ನಪ್ಪಿರುವ ಘಟನೆಗಳು ನಡೆದಿದ್ದರೂ ಕೂಡಾ ಸರ್ಕಾರ ತಾಲ್ಲೂಕ್ ಪಶು ಅಸ್ಪತ್ರೆಗೆ ತಜ್ಞ ವೈದ್ಯಾಧಿಕಾರಿಗಳನ್ನು ನೇಮಿಸುವಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದೆ.

ರಿಪ್ಪನ್‌ಪೇಟೆ ಪಶು ಅಸ್ಪತ್ರೆಯ ವ್ಯಾಪ್ತಿಯಲ್ಲಿ ಮಲೆನಾಡ ಗಿಡ್ಡ ತಳಿ ಜಸ್ಸಿ ಇನ್ನಿತರ ಗಿರ್ ತಳಿಗಳು ಸೇರಿದಂತೆ ಸುಮಾರು 12 ಸಾವಿರ ಜಾನುವಾರುಗಳು ಇದ್ದು ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ರಿಪ್ಪನ್‌ಪೇಟೆ-ಕೆರೆಹಳ್ಳಿಮುಗುಟಿಕೊಪ್ಪ-ಕುಕ್ಕಳಲೇ-ಬರುವೆ- ಕಾರಗೋಡುಮಳವಳ್ಳಿ-ಕಣಬಂದೂರು-ಕೊಳವಳ್ಳಿ-ಕಲ್ಲುಕೊಪ್ಪ-ಜಂಬಳ್ಳಿ-ಮೂಗುಡ್ತಿ- ಹೆದ್ದಾರಿಪುರ-ಕಲ್ಲೂರು- ವಡಾಹೊಸಳ್ಳಿ-ಕಗ್ಗಚಿ-ತಳಲೆ-ಹಾರಂಬಳ್ಳಿ ಹೀಗೆ ಸಾಕಷ್ಟು ಗ್ರಾಮಗಳಲ್ಲಿ ರೈತರು ಜಾನುವಾರುಗಳನ್ನು ಸಾಕಲಾಗಿದ್ದು ಜಾನುವಾರುಗಳಲ್ಲಿ ಕಾಣಿಸಿಕೊಳ್ಳುವ ಮಾರಕ ರೋಗದ ಚಿಕಿತ್ಸೆಗೆ ಇಲ್ಲಿನ ಪಶು ಆಸ್ಪತ್ರೆಯಲ್ಲಿ ಸಮರ್ಪಕವಾದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿವರ್ಗ ಇಲ್ಲದೆ ಲಕ್ಷಾಂತರ ಮೌಲ್ಯದ ಜಾನುವಾರುಗಳಲ್ಲಿ ದಿಡೀರ್ ಕಾಣಿಸಿಕೊಳ್ಳುವ ರೋಗಕ್ಕೆ ಚಿಕಿತ್ಸೆ ಲಭಿಸದೇ ಹಲವು ಜಾನುವಾರುಗಳು ಸಾವನ್ನಪ್ಪಿರುವುದರಿಂದಾಗಿ ರೈತರು ದಿಕ್ಕು ತೋಚದವರಂತಾಗಿ ಹೈನುಗಾರಿಕೆಯಿಂದ ದೂರ ಉಳಿಯುವಂತಾಗಿದೆ ಎಂದು ರೈತರು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸುತಿದ್ದಾರೆ.

ಇನ್ನಾದರೂ ಸರ್ಕಾರ ಮತ್ತು ಜಿಲ್ಲಾಡಳಿತ ಇತ್ತ ಗಮನಹರಿಸಿ ಮಲೆನಾಡಿನ ವ್ಯಾಪ್ತಿಯಲ್ಲಿ ಹೈನುಗಾರಿಕೆಗೆ ಅಗುತ್ತಿರುವ ಸಮಸ್ಯೆಗೆ ಪರಿಹಾರ ಕಲ್ಪಿಸುವರೇ ಕಾದು ನೋಡಬೇಕಾಗಿದೆ.

ಇಂತಹ ನಿರ್ಲಕ್ಶ್ಯದಿಂದ ಹೈನುಗಾರಿಕೆಯನ್ನು ಅಧೋಗತಿಗೆ ತಳ್ಳಿ ಏನೂ ಸಂಬಂಧವಿಲ್ಲದಂತೆ ನಟಿಸುತ್ತಿರುವ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಗೋವಿನ ಶಾಪ ತಟ್ಟದೇ ಇರದು……



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

2 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

2 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

5 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

5 hours ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

10 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

10 hours ago