ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್
ರಿಪ್ಪನ್‌ಪೇಟೆ : ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಾಗರ ಸೊರಬ ಸೇರಿದಂತೆ ಭದ್ರಾವತಿಯಲ್ಲಿ ಕಾಂಗ್ರೇಸ್ ಪಕ್ಷ ಈ ಭಾರಿ ಗೆಲುವು ಸಾಧಿಸಲಿದೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಆಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಭಿಮತ ವ್ಯಕ್ತಪಡಿಸಿದರು.
ರಿಪ್ಪನ್‌ಪೇಟೆಯ ಕಾಂಗ್ರೇಸ್ ಕಛೇರಿಯಲ್ಲಿ ಕೆರೆಹಳ್ಳಿ ಕಸಬಾ ಹೋಬಳಿ ವ್ಯಾಪ್ತಿಯ ಕಾಂಗ್ರೇಸ್ ಬೂತ ಸಮಿತಿಯ ಕಾರ್ಯಕರ್ತರ ಸಮಲೋಚನಾ ಸಭೆಯ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಬಿಜೆಪಿ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ 650 ಭರವಸೆ ನೀಡಿ 150 ಈಡೇರಿಸುವಲ್ಲಿ ಸಂಪೂರ್ಣ ವಿಫಲಗೊಂಡಿದೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರ ಐದು ವರ್ಷದ ಅವಧಿಯಲ್ಲಿ ಬೆಲೆ ಏರಿಕೆಯೊಂದಿಗೆ ಭ್ರಷ್ಟಾಚಾರದಲ್ಲಿಯೇ ಕಾಲಕಳೆದಿದ್ದು ಸಾಮಾನ್ಯ ಜನರ ಸಮಸ್ಯೆ ಪರಿಹಾರ ಕಲ್ಪಿಸುವಲ್ಲಿ ನಿರ್ಲಕ್ಷö್ಯ ವಹಿಸಿರುವುದು ಮತದಾರಿಗೆ ತಿಳಿದಿರುವ ವಿಷಯವಾಗಿದೆ ಎಂದರು.
ಕಾಂಗ್ರೇಸ್ ಪಕ್ಷದ ಆಭ್ಯರ್ಥಿಯನ್ನು ಗೆಲಿಸುವುದೇ ಮುಖ್ಯವಾಗಿದ್ದು ನಮ್ಮ ಕಾರ್ಯಕರ್ತರು ಇಂದಿನಿಂದಲೇ ಕಾರ್ಯಪ್ರವೃತ್ತರಾಗಿದ್ದಾರೆ.ಈ ಭಾರಿ ಸಾಗರ ಕ್ಷೇತ್ರದಲ್ಲಿ ಗೋಪಾಲಕೃಷ್ಣ ಬೇಳೂರು ಮತ್ತು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಿಮ್ಮನೆ ರತ್ನಾಕರ್ ಹೆಚ್ಚಿನ ಬಹುಮತದೊಂದಿಗೆ ಗೆಲ್ಲಿಸಲು ಜನರು ಸಜ್ಜಾಗಿದ್ದಾರೆ, ಕ್ಷೇತ್ರದ ಶಾಸಕ ಹರತಾಳು ಹಾಲಪ್ಪನವರ ಕಾರ್ಯವೈಖರಿಯಿಂದ ಮತದಾರರು ಭ್ರಮನಿರಸನರಾಗಿದ್ದಾರೆಂದು ಹೇಳಿದರು.
ಈಗಾಗಲೇ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೇಸ್ ಪಕ್ಷದ ಕಡೆ ಹೆಚ್ಚು ಮತದಾರರು ಆಸಕ್ತರಾಗಿ ಬೆಂಬಲಿಸುತ್ತಿರುವುದ ನೋಡಿದರೆ ಈ ಭಾರಿ ನಮ್ಮ ಪಕ್ಷದ ಗೆಲುವು ಸ್ಪಷ್ಟವಾಗುತ್ತಿದೆ ಎಂದು ಹೇಳಿ ರಾಜ್ಯದಲ್ಲಿ ಮುಂದಿನ ಸರ್ಕಾರ ಕಾಂಗ್ರೇಸ್ ಪಕ್ಷದ ಸರ್ಕಾರ ಅಧಿಕಾರ ಹಿಡಿಯುವುದು ನಿಶ್ಚಿತವಾಗಿದೆ ಎಂದರು.
ಕಾಂಗ್ರೇಸ್ ಪ್ರಚಾರ ಸಮಿತಿ ಅಧ್ಯಕ್ಷ ಹರತಾಳು ಜಯಶೀಲಪ್ಪಗೌಡ,ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬಿ.ಜಿ.ನಾಗರಾಜ,ರಿಪ್ಪನ್‌ಪೇಟೆ ಕಾಂಗ್ರೇಸ್ ಘಟಕದ ಅಧ್ಯಕ್ಷ ಆಸೀಫ್,ಎಪಿಎಂಸಿ ಮಾ.ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ, ಡಿ.ಈ.ಮಧುಸೂದನ್, ಉಮಾಕರ್,ಉಭೇದುಲ್ಲಾ ಷರೀಫ್,ಕೆರೆಹಳ್ಳಿ ರವೀಂದ್ರ,ರಮೇಶ್ ,ಶ್ರೀಧರ್, ಉಮೇಶ್ ಹೆಚ್.ಎನ್ ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್