PUC RESULT | ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಅನ್ವಿತಾ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆಯಿಂದ ಸನ್ಮಾನ

PUC RESULT | ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಅನ್ವಿತಾ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆಯಿಂದ ಸನ್ಮಾನ – IAS ಗುರಿ ಹೊಂದಿರುವ ಗ್ರಾಮೀಣ ಪ್ರತಿಭೆಯ ಮನದಾಳದ ಮಾತು

ರಿಪ್ಪನ್ ಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಗ್ರಾಮೀಣ ಪ್ರತಿಭೆ ಡಿ ಎನ್ ಅನ್ವಿತಾ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.


ಶಿವಮೊಗ್ಗದ ವಿಕಾಸ ಪಿಯುಸಿ ಕಾಂಪೊಸಿಟ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಡಿ.ಎನ್. ಅನ್ವಿತಾ 600ಕ್ಕೆ 596 ಅಂಕಗಳನ್ನು ಗಳಿಸಿ, ರಾಜ್ಯಕ್ಕೆ ಎರಡನೆ ರ್‍ಯಾಂಕ್ ಪಡೆದಿದ್ದಾರೆ.


ಬಡ ರೈತ ಕುಟುಂಬದಲ್ಲಿ ಜನಿಸಿದ ಅನ್ವಿತಾ.ಡಿ.ಎ.  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಮಲ್ಲೇಸರ ಗ್ರಾಮದವರು. ತಂದೆ ನಾಗರಾಜ ಅವರು ಕೃಷಿಕರು. ತಾಯಿ ಅನುಸೂಯ. ಮಗಳು ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ವಿಚಾರ ತಿಳಿದು ಖುಷಿಯಾಗಿದ್ದಾರೆ.




ಸಾಧನೆಗೆ ಅಸಾಧ್ಯವಾದುದು ಯಾವುದು ಇಲ್ಲ ಆದರೆ ಸಾಧಿಸುವ ಛಲ ಮನುಷ್ಯನಿಗೆ ಇರಬೇಕು ತಾನು ಹಿಡಿದ ಕಾರ್ಯದಲ್ಲಿ ದೃಢವಾದ ನಂಬಿಕೆ  ಅಚಲವಾದ ಮನಸ್ಸು,ನಿರಂತರ ಪರಿಶ್ರಮದಿಂದ ಗುರಿ ಮುಟ್ಟಬಹುದು ಎಂಬುದಕ್ಕೆ ಗ್ರಾಮೀಣ ಭಾಗದ ಪ್ರತಿಭೆ ಅನ್ವಿತಾ ಅತ್ಯುತ್ತಮ ಉದಾಹರಣೆಯಾಗಿದ್ದಾಳೆ.

ನೊಣಬೂರಿನ ಸರಕಾರಿ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪಡೆದ ಇವಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 607 ಅಂಕಗಳನ್ನು ಪಡೆದುಕೊಂಡಿದ್ದಳು.

ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯಿಂದ ಸನ್ಮಾನ ಸ್ವೀಕರಿಸಿ ನಂತರ ಮಾತನಾಡಿ ಕಾಲೇಜಿನ ಉಪನ್ಯಾಸಕರು ಹಾಗೂ ಶಿವಮೊಗ್ಗದ ತೇಜಸ್ ಟ್ರಸ್ಟಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನನ್ನ ಶೈಕ್ಷಣಿಕ ಚಟುವಟಿಕೆಗಳಿಗೆ ಬೆಂಬಲವಾಗಿದ್ದರು.ತರಗತಿಗಳಲ್ಲಿ ಯಾವುದೆ ಸಂದೇಹಗಳಿದ್ದರೂ ಕೇಳಿದಾಗಲೆ ಉಪನ್ಯಾಸಕ ವೃಂದದವರು ಅದನ್ನು ಬಗೆಹರಿಸುತ್ತಿದ್ದರು.




ಆಯಾ ದಿನದ ಪಾಠಗಳನ್ನು ಅಂದೇ ವರ್ಕ್ ಮಾಡುತ್ತಿದ್ದೆ. ಊರಿನಿಂದ ಓಡಾಡುವುದು ಕಷ್ಟ. ಹಾಗಾಗಿ ವಿಕಾಸ ಕಾಲೇಜಿನ ಹಾಸ್ಟೆಲ್‌ನಲ್ಲಿದ್ದೆ. ಅಲ್ಲಿಯೂ ಓದುವ ವಾತಾವರಣ ಇದೆ. ಹಾಗಾಗಿ ಓದಲು ತುಂಬಾ ಅನುಕೂಲವಾಯಿತು. ಹೆಚ್ಚು ಅಂಕ ಪಡೆದ ವಿಚಾರ ತಿಳಿದು ಅಪ್ಪ, ಅಮ್ಮ ತುಂಬಾ ಖುಷಿಯಾಗಿದ್ದಾರೆ. ಮುಂದೆ ವಾಣಿಜ್ಯ ವಿಭಾಗದಲ್ಲಿ ಪದವಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ, ಯುಪಿಎಸ್‌ಸಿ ಪರೀಕ್ಷೆ ತೆಗೆದುಕೊಳ್ಳಬೇಕು ಎಂಬ ಯೋಚನೆ ಇದೆ ಎಂದು ತಿಳಿಸಿದರು.

ಪದವಿ ಪರೀಕ್ಷೆ ಹಾಗೂ ಯುಪಿಎಸ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು ಉನ್ನತ ಉದ್ಯೋಗವನ್ನು ಅಲಂಕರಿಸಿ ಸಮಾಜದ ಮುಖ್ಯ ವಾಹಿನಿಗೆ  ಬಂದು  ಜನ ಸಾಮಾನ್ಯ ರಿಗೆ ಒಳಿತು ಮಾಡಲಿ ಎಂಬುವುದೇ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಆಶಯ….

ಈ ಸಂಧರ್ಭದಲ್ಲಿ ಹಿರಿಯ ಪತ್ರಕರ್ತರುಗಳಾದ ಕೆ ಎಂ ಬಸವರಾಜ್ ,ಸೆಬಾಸ್ಟಿಯನ್ ಮ್ಯಾಥ್ಯೂಸ್‌ ಮತ್ತು ಪೋಸ್ಟ್ ಮ್ಯಾನ್ ನ್ಯೂಸ್ ಸಂಪಾದಕ ರಫ಼ಿ ರಿಪ್ಪನ್‌ಪೇಟೆ , ಆರ್ ಡಿ ಶೀಲಾ ಮತ್ತು ರಾಘವೇಂದ್ರ ಇದ್ದರು..





ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

3 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago