ಕಮಲ ತೊರೆದು ಕೈ ಹಿಡಿದ ಬಾಳೂರು ಗ್ರಾಪಂ ಉಪಾಧ್ಯಕ್ಷ ದಿವಾಕರ್
ರಿಪ್ಪನ್ಪೇಟೆ : ಬಾಳೂರು(Baluru) ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿವಾಕರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಭಾನುವಾರ ಕೆಂಚನಾಲ(Kenchanala) ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಿಧಾನಸಭಾ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್(Congress) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ಪಕ್ಷದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಇವರು ಇಂದು ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.ಬಾಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.
ಇದೇ ಸಂಧರ್ಭದಲ್ಲಿ ಕೆಂಚನಾಲ ಗ್ರಾಮದ ಅಶೋಕ್ ವಡ್ಡಿನಗದ್ದೆ ಸೇರಿದಂತೆ ಅನೇಕ ಯುವಕರು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ.
ಈ ಸಂಧರ್ಭದಲ್ಲಿ ಹೊಸನಗರ ಬ್ಲಾಕ್ ಅಧ್ಯಕ್ಷರಾದ ಬಿ ಜಿ ನಾಗರಾಜ್ , ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ,ಬಿ ಜಿ ಚಂದ್ರಮೌಳಿ , ಈಶ್ವರಪ್ಪ ಗೌಡ ,ಉಬೇದುಲ್ಲಾ ಷರೀಫ್ ,ಮಧುಸೂಧನ ,ಉಲ್ಲಾಸ್, ರಮೇಶ್ ,ಶ್ರೀಧರ್ ಹಾಗೂ ಇನ್ನಿತರರಿದ್ದರು.