ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಕಾರು ಕಾಂಪೌಂಡ್‌ಗೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಗೌತಮಪುರ ಸಂಭವಿಸಿದೆ.
ಮೃತನನ್ನು ಪ್ರಜ್ವಲ್ ಎಂದು ಗುರುತಿಸಲಾಗಿದೆ.
ಗೌತಮಪುರದಿಂದ ಕೋಟೆ ಕೊಪ್ಪಕ್ಕೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿದ್ದ ಮನೆಯೊಂದರ  ಕಾಂಪೌಂಡ್‌ಗೆ ಡಿಕ್ಕಿಯಾಗಿದೆ.
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ಪ್ರಜ್ವಲ್ ಗಂಭೀರವಾಗಿ ಗಾಯಗೊಂಡಿದ್ದು ಮೃತಪಟ್ಟಿದ್ದಾನೆ. 
ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
                         
                         
                         
                         
                         
                         
                         
                         
                         
                        