ಸೊರಬ: ತಾಲೂಕಿನ ಕುಪ್ಪೆ ಗ್ರಾಮದ ಮನೆಯೊಂದರ ಕೊಟ್ಟಿಗೆಯಲ್ಲಿ ಅಡಗಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ.
ಗ್ರಾಮದ ಶಿವಕುಮಾರ್ ಗೌಡ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಚಿರತೆ ಸೇರಿದ್ದು, ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಕಾರ್ಯಪ್ರವೃತರಾದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಸಫಲರಾಗಿದ್ದಾರೆ.
ಚಿರತೆಗೆ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹಂಪೆಯ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಕಳುಹಿಸಿಕೊಡಲಾಗಿದೆ.
ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಡಿಎಫ್ಒ ಸಂತೋಷ್ ಕೆಂಚಪ್ಪ, ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರು, ಆರ್ ಎಫ್ಒ ಜಾವೇದ್ ಅಹ್ಮದ್ ಅಂಗಡಿ, ಶಿವಮೊಗ್ಗ ಲಯನ್ಸ್ ಸಫಾರಿಯ ಅರವಳಿಕೆ ತಜ್ಞ ಡಾ. ಮುರುಳೀಧರ ಸೇರಿದಂತೆ ಸ್ಥಳೀಯ ಅರಣ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.