w
Headlines
Home » ಮಾಸ್ತಿಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಾಯ|accident

ಮಾಸ್ತಿಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಾಯ|accident

ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಲಕ್ಷ್ಮಿ ನರಸಿಂಹ ದೇವಸ್ಥಾನದ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ.




ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬಾ ಬಸ್ ಲಕ್ಷ್ಮಿನರಸಿಂಹ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ.

ಬಸ್ ಅಪಘಾತದಲ್ಲಿ ಸುಮಾರು 15 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಉಡುಪಿ ಜಿಲ್ಲೆಯ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.




ಅಪಘಾತದ ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಹೊಸನಗರ 108 ಆ್ಯಂಬುಲೆನ್ಸ್ ಸಿಬ್ಬಂದಿಗಳು ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.