ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಹೆದ್ದಾರಿಯಲ್ಲಿ ಭಾರಿ ಗಾಳಿ ಮಳೆಗೆ ಮರವೊಂದು ನೆಲಕ್ಕುರುಳಿದ್ದು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ತೀರ್ಥಹಳ್ಳಿ ರಸ್ತೆಯ ಶಬರೀಶನಗರದ ಬಳಿ ರಸ್ತೆ ಬದಿಯಲ್ಲಿದ್ದ ಮಾವಿನ ಮರವೊಂದು ಭಾರಿ ಗಾಳಿಯ ಪರಿಣಾಮ ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದ ರಿಪ್ಪನ್‌ಪೇಟೆ – ತೀರ್ಥಹಳ್ಳಿ ಸಂಪರ್ಕ ರಸ್ತೆಯಲ್ಲಿ ಸಂಚಾರದಲ್ಲಿ ವ್ಯತ್ಯಯವಾಗಿತ್ತು.
ಈಗ ಬೈಪಾಸ್ ರಸ್ತೆಯಲ್ಲಿ ವಾಹನಗಳು ಸಂಚರಿಸುತಿದ್ದು ತೆರವು ಕಾರ್ಯಾಚರಣೆಗೆ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ.