w
Headlines
Home » ರಿಪ್ಪನ್‌ಪೇಟೆ : ನಾಪತ್ತೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ|missing

ರಿಪ್ಪನ್‌ಪೇಟೆ : ನಾಪತ್ತೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ|missing

ರಿಪ್ಪನ್‌ಪೇಟೆ : ಕಳೆದ ಏಳು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಕೃಷಿಕ ವೀರಪ್ಪ(62)
ಮೃತಪಟ್ಟ ವ್ಯಕ್ತಿಯಾಗಿದ್ದಾರೆ.




ಕಳೆದ ಏಳು ದಿನಗಳಿಂದ ಕಾಣೆಯಾಗಿದ್ದ ವೀರಪ್ಪ ರವರನ್ನು ಕುಟುಂಬಸ್ಥರು ಎಲಾ ಕಡೆ ಹುಡುಕಾಡಿದ್ದಾರೆ ನಂತರ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ಕೂಡಾ ದಾಖಲಿಸಿದ್ದರು.

ಇಂದು ವೀರಪ್ಪ ರವರ ಮನೆ ಹಿಂಭಾಗ ದಟ್ಟ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ.

ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು ಸಾವಿಗೆ ನಿಖರವಾದ ಕಾರಣ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ.




ಸ್ಥಳಕ್ಕೆ ರಿಪ್ಪನ್‌ಪೇಟೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿ  ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.






Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.