Headlines

ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನಲೆ ಇಂದು ಸಂಜೆ 6 ರಿಂದ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ – ವಿಜಯೋತ್ಸವ,ಪಟಾಕಿ ಸಿಡಿಸಲು,ಬೈಕ್ ರ್‍ಯಾಲಿಗೆ ಇಲ್ಲ ಅವಕಾಶ

ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಸಂಜೆ 6 ಗಂಟೆಯಿಂದ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಮೇ 12ರ ಸಂಜೆ 6 ರಿಂದ ಮೇ14 ರ ರಾತ್ರಿ 10 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ವಿಜಯೋತ್ಸವ ಸಾರ್ವಜನಿಕವಾಗಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸಾರ್ವಜನಿಕವಾಗಿ ಚೂರಿ ಇನ್ನಿತರ ಆಯುಧಗಳನ್ನು ತೆಗೆದುಕೊಂಡು ಹೋಗುವುದು, ಸಾರ್ವಜನಿಕ ಸಮಾರಂಭ ಪ್ರತಿಭಟನೆ ನಡೆಸುವುದು ಎಲ್ಲವನ್ನು ನಾಳೆ ಶಿವಮೊಗ್ಗ ಜಿಲ್ಲೆಯಾದ್ಯಂತ ಸಂಪೂರ್ಣ ನಿಷೇದಿಸಲಾಗಿದೆ.

ಶವ ಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್ 19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ವಿಧಿಸಿ ಆದೇಶ ಹೊರಡಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *