ರಿಪ್ಪನ್ಪೇಟೆ : ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು
ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಪರ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಈ ಬಾರಿ ಯಾವುದೇ ಗೊಂದಲವಿಲ್ಲದೇ ಬಿಜೆಪಿ ಸರ್ಕಾರ ರಚಿಸಲಿದೆ, ಯಡಿಯೂರಪ್ಪನವರ ನಕ್ಷತ್ರದಲ್ಲಿಯೇ ಬರೆದಿತ್ತು ಆಪರೇಷನ್ ನಡೆಸಿಯೇ ಸರ್ಕಾರ ರಚಿಸಬೇಕಾಗಿತ್ತು ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ ಎಂದು ಹೇಳಿದರು.
ಸಾಗರ ಕ್ಷೇತ್ರದಲ್ಲಿನ ಹಲವು ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಹರತಾಳು ಹಾಲಪ್ಪ ಶ್ರಮಿಸಿದ್ದಾರೆ.ಈ ಭಾರಿಯಲ್ಲಿ ಅವರನ್ನು ಗೆಲಿಸುವುದರಿಂದ ಇನ್ನೂ ಹೆಚ್ಚಿನ ಅಭಿವೃದ್ದಿಯಾಗುವುದರೊಂದಿಗೆ ಬಗರ್ ಹುಕುಂ ಸಮಸ್ಯೆ ಅರಣ್ಯ ಒತ್ತುವರಿದಾರರ ಸಮಸ್ಯೆಗೆ ಶಾಸನ ಸಭೆಯಲ್ಲಿ ದ್ವನಿ ಎತ್ತುವುದರೊಂದಿಗೆ ಶಾಶ್ವತ ಪರಿಹಾರ ಕಲ್ಪಿಸುವರೆಂದು ಹೇಳಿ ಮೇ. 10 ರಂದು ನಡೆಯುವ ಚುನಾವಣೆಯಲ್ಲಿ ಕಮಲದ ಚಿಹ್ನೆಗೆ ಮತ ನೀಡುವಂತೆ ಮನವಿ ಮಾಡಿದರು.
ಸಭೆಯಲ್ಲಿ ಶಾಸಕ ಹಾಗೂ ಅಭ್ಯರ್ಥಿ ಹರತಾಳು ಹಾಲಪ್ಪ ಮಾಜಿ ಶಾಸಕ ಬಿ.ಸ್ವಾಮಿರಾವ್, ಎ.ಟಿ.ನಾಗರತ್ನಮ್ಮ, ಸುರೇಶ್ಸ್ವಾಮಿರಾವ್, ಬಿಜೆಪಿಮುಖಂಡರಾದ ಡಾ.ರಾಜಾನಂದಿನಿ,ತಲ್ಲೂರು ರಾಜು,ಕೆರೆಕೈ ಪ್ರಸನ್ನ,ಗಣಪತಿಬೆಳಗೋಡು,ಎಂ.ಬಿ.ಮಂಜುನಾಥ,ಮಂಜುಳಕೇತಾರ್ಜಿರಾವ್, ಬಿ.ಯುವರಾಜ್,ವೀರೇಶ್ಅಲುವಳ್ಳಿ,ಬೆಳ್ಳೂರು ತಿಮ್ಮಪ್ಪ,ಹೊನಗೋಡು ರತ್ನಾಕರ್,ಸುರೇಶ್ಸಿಂಗ್,ಇನ್ನಿತರ ಪಕ್ಷದ ಮುಖಂಡರು ಹಾಜರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್