ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಮೃತರನ್ನು ಕೋಡೂರು ಸಮೀಪದ ತುರುಕೋಡು ನಾಗರಾಜ್ ಗೌಡ (55) ಎಂದು ಗುರುತಿಸಲಾಗಿದೆ.
ಶಿಕಾರಿಪುರದಿಂದ ವಾಪಾಸ್ ಆಗುವ ವೇಳೆ ಇಂದು ಮಧ್ಯಾಹ್ನ ಗೌತಮಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ನಾಗರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ಹೊಸನಗರ ತಾಲೂಕಿನ ಮುಂಬಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದರು.
ಕಾರಿನಲ್ಲಿ ಮೂರು ಜನರಿದ್ದು ಓರ್ವನಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಗರಾಜ್ ಮೃತ ದೇಹವು ಸರ್ಜಿ ಆಸ್ಪತ್ರೆಯಲ್ಲಿದ್ದು ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಂತಾಪ :
ಕಾರು ಅಪಘಾತದಲ್ಲಿ ಮೃತಪಟ್ಟ ಕಾಂಗ್ರೆಸ್ ಮುಖಂಡ ನಾಗರಾಜ್ ಗೌಡ ರವರ ಅಕಾಲಿಕ ನಿಧನಕ್ಕೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ,ಅಪೇಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ,ಜಿಪಂ ಮಾಜಿ ಸದಸ್ಯ ಕಲಗೋಡು ರತ್ನಾಕರ್ ,ಮುಖಂಡರಾದ ಅಮೀರ್ ಹಂಜಾ ಬಿ ಜಿ ಚಂದ್ರಮೌಳಿ ,ಎಂ ಎಂ ಪರಮೇಶ್ ಸೇರಿದಂತೆ ಇನ್ನಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್