ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್ ಹಾಲಪ್ಪ ಹರತಾಳು ರವರು ಹರತಾಳು ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು.
ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿರುವ ಶಾಸಕ ಹರತಾಳು ಇಂದು ತಮ್ಮ ಪತ್ನಿ ಯಶೋಧ ಹಾಲಪ್ಪ ಮತ್ತು ಕುಟುಂಬದ ಸದಸ್ಯರೊಂದಿಗೆ ಹರತಾಳು ಸರ್ಕಾರಿ ಶಾಲೆಯ ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು.
ಈ ಸಂಧರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು.