ಶಿವಮೊಗ್ಗ : ಮಹಿಳೆಯೊಬ್ಬಳ ಅಶ್ಲೀಲ ವಿಡಿಯೋ ಮತ್ತು ಚಿತ್ರಗಳನ್ನು ಮೊಬೈಲ್ ನಲ್ಲಿ ಚಿತ್ರಿಸಿ ತನ್ನ ಬಳಿ ಬರುವಂತೆ ಬ್ಲ್ಯಾಕ್ ಮೇಲ್ ಮಾಡಿ, ಮಹಿಳೆಯ ಸಂಬಂಧಿಕರಿಗೆ ಆ ಖಾಸಗಿ ಫೋಟೊ, ವಿಡಿಯೋಗಳನ್ನು ಶೇರ್ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ವ್ಯಕ್ತಿಯು ಮಹಿಳೆಯೊಂದಿಗೆ ಸಲುಗೆಯಿಂದ ವರ್ತಿಸಿದ್ದು, ಬೆಂಗಳೂರಿನಲ್ಲಿದ್ದಾಗ ಮಹಿಳೆಯ ಖಾಸಗಿ ಫೋಟೊ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಮಹಿಳೆಯು ಶಿವಮೊಗ್ಗದಲ್ಲಿ ವಾಸವಿದ್ದು ಆಕೆಗೆ ಕರೆ ಮಾಡಿ ತನ್ನೊಂದಿಗೆ ಬಂದಿರುವಂತೆ ಒತ್ತಡ ಹೇರುತ್ತಿದ್ದ. ಇಲ್ಲದ್ದಿದ್ದರೆ ಸಂಬಂಧಿಕರಿಗೆ ಖಾಸಗಿ ಫೋಟೊಗಳನ್ನು ಕಳುಹಿಸುವುದಾಗಿ ಬೆದರಿಸಿದ್ದ. ನಂತರ, ಆಕೆ ಅದ್ಯಾವುದನ್ನೂ ಕೇಳದಿದ್ದಾಗ ಸಂಬಂಧಿಕರಿಗೆ ಕಳುಹಿಸಿದ್ದಾನೆ ಎನ್ನಲಾಗಿದೆ.
ಮಹಿಳೆಯು ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.