ಶಿವಮೊಗ್ಗ: ಮುಸ್ಲಿಂ ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.
ಭದ್ರಾವತಿಯ ವಿಶ್ವೇಶ್ವರಯ್ಯ ನಗರದ ಹಿಂದೂ ಯುವಕ ಹಾಗೂ ಖಲಂದರ್ ನಗರದ ಮುಸ್ಲಿಂ ಯುವತಿ ಇಬ್ಬರೂ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಮುಸ್ಲಿಂ ವಿದ್ಯಾರ್ಥಿನಿಯ ಸಹೋದರಿಗೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ವಿಷಯ ತಿಳಿದ ನಂತರ ಆಕೆ ತನ್ನ ಸಹಪಾಠಿ ಹಿಂದೂ ಯುವಕನಿಂದ ಬೈಕ್ನಲ್ಲಿ ತನ್ನ ಮನೆಗೆ ಡ್ರಾಪ್ ಪಡೆದಿದ್ದಳು.
ಡ್ರಾಪ್ ನೀಡಿ ವಾಪಸ್ಸಾಗುತ್ತಿದ್ದ ವೇಳೆ ಝಂಡಾಕಟ್ಟೆ ಬಳಿ ಮುಸ್ಲಿಂ ಯುವಕರ ಗುಂಪು ಹಿಂದೂ ಯುವಕನನ್ನು ಅಡ್ಡ ಹಾಕಿದೆ. ನಿನ್ನ ಹೆಸರೇನು ಎಂದು ಪ್ರಶ್ನೆ ಮಾಡಿದ್ದು, ಆತ ಹೆಸರು ಹೇಳುತ್ತಿದ್ದ ಹಾಗೆಯೇ ನಮ್ಮ ಯುವತಿಯನ್ನು ನೀನು ಬೈಕ್ನಲ್ಲಿ ಏಕೆ ಕೂರಿಸಿಕೊಂಡು ಬಂದೆ ಎಂದು ಪ್ರಶ್ನಿಸಿ ಏಕಾಏಕಿ ಹಲ್ಲೆ ನಡೆಸಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹಿಂದು ಯುವಕನ ಇಬ್ಬರು ಸ್ನೇಹಿತರ ಮೇಲೆಯೂ ಗುಂಪು ಹಲ್ಲೆ ನಡೆಸಿದೆ. ಈ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಗಲಾಟೆ ಬಿಡಿಸಿ ಕಳುಹಿಸಿದ್ದಾರೆ. ಗಲಾಟೆ ಬಿಡಿಸಿದ ಸ್ಥಳೀಯರಿಗೂ ಮುಸ್ಲಿಂ ಯುವಕರ ಗುಂಪು ಬೆದರಿಕೆ ಹಾಕಿದೆ ಎನ್ನಲಾಗಿದೆ. ಘಟನೆ ಕುರಿತು ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್