ನಿದ್ದೆ ಮಂಪರಿನಲ್ಲಿದ್ದ ಚಾಲಕ – ತಳುವೆ ಬಳಿ ಕಾರು ಪಲ್ಟಿ !
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಳುವೆಯ ಶಾಲೆಯ ಸಮೀಪ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಪಲ್ಟಿ ಹೊಡೆದಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ಹೋಗುತ್ತಿದ್ದ ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎನ್ನಲಾಗುತ್ತಿದ್ದು ಆತನನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ಕರೆದೋಯ್ಯಲಾಗಿದೆ.
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದು ಇದರಿಂದ ಹಾಗಾಗಿ ಯಾವುದೇ ರೀತಿ ಗಂಭೀರ ಗಾಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಚಾಲಕನ ನಿದ್ದೆ ಮಂಪರಿನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.