ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿಯಲ್ಲಿ ನಡೆದಿದೆ.
ಮೂಡಿಗೆರೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರು ಮೇಲಿನಕುರುವಳ್ಳಿ ಸಮೀಪದ ತೀರಳೆಬೈಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಕಾರಿನಲ್ಲಿ ಚಾಲಕನೊಬ್ಬನೆ ಪ್ರಯಾಣಿಸುತಿದ್ದು ನಿದ್ದೆ ಮಂಪರಿನಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತಿದೆ.ತಕ್ಷಣವೇ ಸ್ಥಳೀಯರು ಚಾಲಕನನ್ನು ಕಾರಿನಿಂದ ಹೊರ ತೆಗೆದಿದ್ದಾರೆ. ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.