ಶಿವಮೊಗ್ಗ ಜಿಲ್ಲೆಯ ಚೋರಡಿ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಇಬ್ಬರು ಸಾವನ್ನಪ್ಪಿದ್ದು ಮೂವತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆಗೆ ದೌಡಾಯಿಸಿದ ಸಂಸದ ಬಿ ವೈ ರಾಘವೇಂದ್ರ
ಬಸ್ ಅಪಘಾತದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿಶೇಷ ವೈದ್ಯರ ತಂಡ, ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದೆ. ಘಟನೆಯ ಬಗ್ಗೆ ವಿಷಯ ತಿಳಿಯುತ್ತಲೇ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಗಾಯಾಳುಗಳ ಬಳಿಯಲ್ಲಿ ಘಟನೆಯ ಮಾಹಿತಿ ಪಡೆದ ಸಂಸದರು ಚಿಕಿತ್ಸೆಯ ವ್ಯವಸ್ಥೆಯನ್ನು ಗಮನಿಸುತ್ತಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿ ಘಟನೆ ಬಗ್ಗೆ ಹೇಳಿದ್ದೇನು..??
ಇನ್ನೂ ಘಟನೆ ಬಗ್ಗೆ ವಾಟ್ಸ್ಯಾಪ್ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಇದುವರೆಗೂ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹೊಸದುರ್ಗದ ತಿಪ್ಪೇಸ್ವಾಮಿ ಹಾಗು ಇನ್ನೊಬ್ಬರು ಅಪರಿಚಿತ ಪುರುಷ ಎಂದು ತಿಳಿಸಿದ್ದಾರೆ.
ಇನ್ನೂ 30 ಮಂದಿ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದು, ನಾಲ್ವರನ್ನ ಆಯನೂರಿನ ಸಿಹೆಚ್ಸಿಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದ್ದು, ಅವರನ್ನು ಸಹ ಮೆಗ್ಗಾನ್ಗೆ ಶಿಪ್ಟ್ ಮಾಡಲಾಗುತ್ತಿದೆ. ಇನ್ನೂ ಮೂವರ ಸ್ಥಿತಿಯು ಗಂಭೀರವಾಗಿದ್ದು, 6 ಜನರಿಗೆ ಮೈನರ್ ಇಂಜುರಿಯಾಗಿದೆ ಎಂದು ತಿಳಿಸಿದ್ದಾರೆ.