ತೀರ್ಥಹಳ್ಳಿ ತಾಲ್ಲೂಕಿನ, ಕುರುವಳ್ಳಿ ಪುತ್ತಿಗೆ ಮಠದ ಬಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಇಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸ್ತಿದ್ಧಾರೆ. ಮೂಲಗಳ ಪ್ರಕಾರ, ಕೊಲೆಯಾದವರು ದಾವಣಗೆರೆ ಜಿಲ್ಲೆ ಕಾರ್ಮಿಕರು ಎನ್ನಲಾಗಿದೆ.
ನಿನ್ನೆ ರಾತ್ರಿ ನಡೆದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಕೆಲವೇ ದಿನದಲ್ಲಿ ಸಮುದಾಯ ಭವನ ಉದ್ಘಾಟನೆಯಾಗಬೇಕಿದ್ದು, ಅದರ ನಡುವೆ ಸಮುದಾಯದ ಭವನದಲ್ಲಿ ಈ ಘಟನೆ ನಡೆದಿದೆ.
ನಿನ್ನೆ ರಾತ್ರಿ ಕುಡಿದ ಮತ್ತಿನಲ್ಲಿ ಮೂವರು ಕಾರ್ಮಿಕರ ನಡುವೆ ಜಗಳ ನಡೆದಿದೆ. ಈ ವೇಳೆ ಓರ್ವನ ಮೇಲೆ ಹಲ್ಲೆಯಾಗಿದೆ. ಆತ ಮತ್ತೆ ಹೋಗಿ ಕುಡಿದು ಬಂದು ಪಿಕಾಸಿಯಿಂದ ಮಲಗಿದ್ದ ಇನ್ನಿಬ್ಬರ ಮೇಲೆ ಹಲ್ಲೆ ಮಾಡಿದ್ಧಾನೆ ಎನ್ನಲಾಗುತ್ತಿದೆ.
ಸದ್ಯ ಘಟನೆ ಸಂಬಂಧ ಮಾಹಿತಿ ನೀಡಿರುವ ಎಸ್ಪಿ ಮಿಥುನ್ ಕುಮಾರ್, ವಿಶ್ವಕರ್ಮ ಸಮುದಾಯ ಭವನದಲ್ಲಿ ಕೆಲಸ ಮಾಡುತ್ತಿದ್ದ ಮಾಡುತ್ತಿದ್ದ ಕಾರ್ಮಿಕರು ಇವಾಗಿದ್ದು, ನಿನ್ನೆಯ ಗಲಾಟೆಯಲ್ಲಿ ಇಬ್ಬರ ಕೊಲೆಯಾಗಿದೆ. ಪ್ರಕರಣ ಸಂಬಂಧ ಓರ್ವನನ್ನ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…