ನವೋದಯ ‘ಪ್ರಥಮ PUC’ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ : ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ

ಶಿವಮೊಗ್ಗ : ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ 11 ನೇ ತರಗತಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಯನ್ನು ದಿ:22/07/2023 ರಂದು ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಆಸಕ್ತ ವಿದ್ಯಾರ್ಥಿಗಳು ವೆಬ್ಸೈಟ್ www.navodaya.gov.in ಮೂಲಕ ಮೇ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ

ಶಿವಮೊಗ್ಗ : 2023-24 ನೇ ಸಾಲಿನ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶ ಸೀಟುಗಳನ್ನು ಪ್ರಾಂಶುಪಾಲರ ಹಂತದಲ್ಲಿಯೇ(ಸ್ಪಾಟ್ ಅಡ್ಮಿಷನ್)ಭರ್ತಿ ಮಾಡಲು ಮೇ 09 ರಿಂದ ಮೇ 31 ರವರೆಗೆ ನೇರವಾಗಿ ಪ್ರವೇಶ ನೀಡಲಾಗುವುದು.

ಕೋರ್ಸುಗಳ ವಿವರ : ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್-ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್-63 ಸೀಟುಗಳು. ಕಮರ್ಷಿಯಲ್ ಪ್ರಾಕ್ವೀಸ್(ಕನ್ನಡ)-33 ಸೀಟುಗಳು. ಕಮರ್ಷಿಯಲ್ ಪ್ರಾಕ್ವೀಸ್(ಆಂಗ್ಲ)-32 ಸೀಟುಗಳು. ಆಪರಲ್ ಡಿಸೈನ್ & ಫ್ಯಾಬ್ರಿಕೇಷನ್ ಟೆಕ್ನಾಲಜಿ-63 ಸೀಟುಗಳು ಲಭ್ಯವಿದ್ದು, ಅಭ್ಯರ್ಥಿಯು ಎಸ್‌ಎಸ್‌ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.35 ಅಂಕಗಳೊಂದಿಗೆ ಉತ್ತೀರ್ಣರಾದವರು ಅರ್ಜಿ ಸಲ್ಲಿಸುವುದು. ಪ್ರವೇಶ ವೇಳೆ ಅಭ್ಯರ್ಥಿಯು ಎಸ್‌ಎಸ್‌ಎಲ್ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ/ಎನ್‌ಓಸಿ, 05 ವರ್ಷದ ವ್ಯಾಸಂಗ ಪ್ರಮಾಣ ಪತ್ರ ಕ್ಷೇತ್ರ ಶಿಕ್ಷಣಾಧಿಕಾರಿಗಳವರ ದೃಢೀಕರಿಸಿದ ಸಹಿಯೊಂದಿಗೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, 04 ಭಾವಚಿತ್ರ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ರವಿನಾಯ್ಕ.ಡಿ, ಪ್ರಾಂಶುಪಾಲರು, ಮೊ.ಸಂ: 9886610245, ರುದ್ರೇಶ್.ಡಿ.ಎನ್ ಪ್ರವೇಶ ಸಂಪರ್ಕಾಧಿಕಾರಿಗಳು ಮೊ.ಸಂ: 9686396494/ 7975155925 ಇವರುಗಳನ್ನು ಸಂಪರ್ಕಿಸುವಂತೆ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *