ಸಾಗರ-ಹೊಸನಗರ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಗೋಪಾಲಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ನಾಳೆ(ಗುರುವಾರ) ತಾಲ್ಲೂಕಿನ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ.
ಈ ಬಗ್ಗೆ ಸಾಗರ ತಾಲೂಕು ಪಂಚಾಯತ್ ಕಾರ್ಯಾಲಯ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಸಾಗರದ ಬಿಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಮೊದಲ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿದ್ದು ಸಭೆ ಶಾಸಕರು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಅಗತ್ಯ ಮಾಹಿತಿಯೊಂದಿಗೆ ಸಭೆಯಲ್ಲಿ ಹಾಜರಾಗುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.