ನೂತನ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಎದುರಾಗಲಿರುವ ಹತ್ತು ಹಲವು ಸವಾಲುಗಳು – ಸಮುದಾಯ ಆಸ್ಪತ್ರೆ, ಪಟ್ಟಣ ಪಂಚಾಯಿತಿ ಕನಸು ಈಡೇರುವುದೇ???? GKB

ನೂತನ ಶಾಸಕರಿಗೆ ಎದುರಾಗಲಿರುವ ಹತ್ತು ಹಲವು ಸವಾಲುಗಳು

ರಿಪ್ಪನ್‌ಪೇಟೆ : ಶರಾವತಿ ಮುಳುಗಡೆ ಸಂತ್ರಸ್ತರ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆ ಮತ್ತು ರಿಪ್ಪನ್‌ಪೇಟೆ ಹೋಬಳಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪಶು ಅಸ್ಪತ್ರೆಯ ವೈದ್ಯಾಧಿಕಾರಿಗಳ ಸಿಬ್ಬಂದಿಗಳ ಮತ್ತು ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರವನ್ನು ಮೇಲ್ದರ್ಜೇಗೇರಿಸುವುದು ಶಾಶ್ವತ ಸುಸಜ್ಜಿತ ಬಸ್ ನಿಲ್ದಾಣ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯಿತ್‌ನ್ನಾಗಿ ಮೇಲ್ದರ್ಜೇಗೇರಿಸುವುದು ಸೇರಿದಂತೆ ಇನ್ನೂ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವುದು ನೂತನ ಶಾಸಕ ಗೋಪಾಲಕೃಷ್ಣ ಬೇಳೂರರಿಗೆ ಎದುರಾಗಿರುವ ಪ್ರಮುಖ ಸವಾಲುಗಳು.


ಕಳೆದ 10 ವರ್ಷದ ಹಿಂದಿನ ಅವಧಿಯಲ್ಲಿ ಸಾಗರ-ಹೊಸನಗರ ಕ್ಷೇತ್ರದಲ್ಲಿ ಬಿ.ಎಸ್.ಯಡಿಯೂರಪ್ಪನವರ ಬಿಜೆಪಿ ನೇತೃತ್ವದ ಪಕ್ಷದ ಶಾಸಕರಾವಧಿಯಲ್ಲಿ ಹೊಸನಗರ ತಾಲ್ಲೂಕ್ ಕೇಂದ್ರವನ್ನು ಮಾದರಿ ತಾಲ್ಲೂಕ್ ಕೇಂದ್ರವನ್ನಾಗಿಸುವ ಮಹದಾಸೆಯಲ್ಲಿ ಸುಸಜ್ಜಿತ ಬಸ್ ನಿಲ್ದಾಣ,ಮಿನಿ ವಿಧಾನಸೌಧ,ಅಗ್ನಿಶಾಮಕ ದಳದ ಕಛೇರಿ ಪಿಡಬ್ಲಡಿ ಕಛೇರಿ ಹೀಗೆ ಹಲವು ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲು ಶ್ರಮಿಸಿದ ಅವರನ್ನುಆ ಚುನಾವಣೆಯಲ್ಲಿ ಕ್ಷೇತ್ರದ ಜನರು ತಿರಸ್ಕರಿಸಿದ್ದರು ನಂತರದಲ್ಲಿ ಬಂದ ಜನಪ್ರತಿನಿಧಿಗಳು ಸಂಪರ್ಕ ರಸ್ತೆ ಇನ್ನಿತರ ಅಭಿವೃದ್ದಿಗೆ ಅನುದಾನವನ್ನು ತರುವುದರೊಂದಿಗೆ ಅಭಿವೃದ್ದಿಯ ಜಪಮಾಡಿ ರಿಪ್ಪನ್‌ಪೇಟೆ ಹೋಬಳಿಯನ್ನು ಕಡೆಗಣಿಸಿದಂತೆ ಕಾಣುವಂತೆ ಮಾಡಿದರು ಎಂಬುದಕ್ಕೆ ಇಲ್ಲಿನ ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರವೇ ಪ್ರಮುಖ ಸಾಕ್ಷಿಯಾಗಿದೆ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ರಾಜ್ಯ ಕಂದಾಯ ಸಚಿವ ಕಾಗೋಡು ತಿಮ್ಮಪ್ಪನವರ ಅಧಿಕಾರ ಅವಧಿಯಲ್ಲಿ ಗವಟೂರು ಬಳಿ 5 ಎಕರೆ ಜಾಗವನ್ನು ಅಸ್ಪತ್ರೆಗೆ ಮಂಜೂರಾತಿ ಮಾಡಲಾದರು ಕೂಡ ಕಟ್ಟಡ ಕಾಮಗಾರಿಗೆ ನಂತರದಲ್ಲಿ ಬಂದ ಶಾಸಕರು ಗಮನಹರಿಸದಿರುವುದು ಪಟ್ಟಣದ ಸುತ್ತಮುತ್ತಲಿನ ಜನರಲ್ಲಿ ತೀವ್ರ ಅಕ್ರೋಶಕ್ಕೆ ಗುರಿಯಾಗಿತ್ತು.

ಇನ್ನೂ ಕೆರೆಹಳ್ಳಿಯಲ್ಲಿ ಕೈಗಾರಿಕಾ ವಸಾಹತು ಪ್ರದೇಶಕ್ಕಾಗಿ ಸಚಿವ ಕಾಗೋಡು ತಿಮ್ಮಪ್ಪನವರು ಪ್ರತ್ಯೇಕ ಜಾಗವನ್ನು ಮಂಜೂರು ಮಾಡಿಸಿ ರಸ್ತೆ ಮತ್ತು ನೀರಿನ ಸೌಲಭ್ಯ ಹೀಗೆ ಅಗತ್ಯವಾದ ಕೃಗಾರಿಕೆಗಳಿಗೆ ಜಾಗವನ್ನು ಮೀಸಲಿರಿಸಲಾದರೂ ಕೂಡಾ ಶಾಸಕರು ಗಮನಹರಿಸದೇ ನಿರ್ಲಕ್ಷ ವಹಿಸಿದರು ಎಂದು ಹಲವರಲ್ಲಿ ಸುದ್ದಿಗೆ ಗ್ರಾಸವಾಗಿದೆ.

ಇನ್ನೂ ಕ್ಷೇತ್ರದ ಮಾಜಿ ಶಾಸಕ ಹರತಾಳು ಹಾಲಪ್ಪ ಎರಡುವರೆ ವರ್ಷದ ಅವಧಿಯ ಸರ್ಕರದಲ್ಲಿ ಇಲ್ಲಿನ ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ನಾಲ್ಕು ರಸ್ತೆಯ ತಲಾ ಒಂದು ಕಿ.ಮೀ
ರಸ್ತೆಯನ್ನು ಡಬಲ್ ರಸ್ತೆಯನ್ನಾಗಿಸುತ್ತೇನೆಂದು ಹೇಳಿ ಈಗಾಗಲೇ ಕಾರವಾರ ಜಿಲ್ಲೆಯ ಸಂಪರ್ಕದ ಸಾಗರ ಸಂಪರ್ಕದ ಒಂದು ಕಿ.ಮೀ.ರಸ್ತೆ ಅಗಲೀಕರಣ ಕಾಮಗಾರಿ ಅರಂಭವಾಗಿ ಮೂರು ತಿಂಗಳುಗಳಾದರು ಕೂಡಾ ಇನ್ನೂ ಅಮೆಗತಿಯಲ್ಲಿ ಕಾಮಗಾರಿ ಸಾಗುವಂತಾಗಿದ್ದು ಇನ್ನೂ ಮೂರು ಸಂಪರ್ಕ ರಸ್ತೆಗಳ ಕುರಿತು ಬಹಿರಂಗ ಸಭೆಯಲ್ಲಿ ಮುಂದಿನ ಭಾರಿ ನಾನೇ ಶಾಸಕನಾಗಿ ಬಂದು ಸರ್ಕಾರದಿಂದ ಅನುದಾನ ತಂದು ಆಭಿವೃದ್ದಿ ಪಡಿಸುವುದಾಗಿ ಬಹಿರಂಗವಾಗಿ ಘೋಷಿಸಿದ್ದ ಹರತಾಳು ಹಾಲಪ್ಪ ಪರಾಭವಗೊಂಡ ಹಿನ್ನೇಲೆಯಲ್ಲಿ ಈ ಕಾಮಗಾರಿ ಅಲ್ಲಿಯೇ ಉಳಿಯುವುದೋ ಎಂಬ ಜಿಜ್ಞಾಸೆ ಮೂಡಿದ್ದು ಹಾಲಿ ಶಾಸಕ ಗೋಪಾಲಕೃಷ್ಣ ಬೇಳೂರರಿಗೆ ಸವಾಲಾಗಿವೆ ಇದನ್ನು ಪೂರ್ಣಗೊಳಿಸುವತ್ತಾ ನೂತನ ಶಾಸಕರು ಸಮರ್ಥರಾಗಿ ನಿರ್ವಹಿಸುವರೇ ಕಾದು ನೋಡಬೇಕಾಗಿದೆ.

ಕಳೆದ ಎರಡು ಅವಧಿಯಲ್ಲಿ ಶಾಸಕರಾಗಿ ವಿಧಾನಸಭಾ ಶಾಸನ ಸಭೆಯಲ್ಲಿ ಮಾತನಾಡದವರು ಶಾಸಕರಾಗಿ ಕ್ಷೇತ್ರದ ಬಗ್ಗೆ ಮಾತನಾಡದವರು ಈಗ ಶಾಸಕರಾಗಿ ಆಯ್ಕೆಯಾಗಿ ಏನು ಮಾಡಿಯಾರು ಎಂದು ಬಹಿರಂಗವಾಗಿ ಹೇಳುತ್ತಿದ್ದವರಿಗೆ ಈ ಭಾರಿ ಪುನ: ಆಯ್ಕೆಯಾಗಿರುವ ಗೋಪಾಲಕೃಷ್ಣ ಬೇಳೂರರಿಗೆ ಮಲೆನಾಡಿನ ಮೂಲಭೂತ ಸಮಸ್ಯೆಗಳಾದ ಶರಾವತಿ ಮುಳುಗಡೆ ರೈತರಿಗೆ ಭೂ ಮಂಜೂರಾತಿ ಮತ್ತು ಆರಣ್ಯ ಕಂದಾಯ ಭೂಮಿ ಆಕ್ರಮ ಸಾಗುವಳಿದಾರರಿಗೆ ಸಾಗುವಳಿ ಪತ್ರ ಕೊಡಿಸುವುದು ಸೇರಿದಂತೆ ಹಲವು ಸಮಸ್ಯೆಗೆ ಪರಿಹಾರ ಕಲ್ಪಿಸುವುದರ ಬಗ್ಗೆ ನೂತನ ಶಾಸಕರು ಏನೂ ಮಾಡುತ್ತಾರೋ…………!!!!
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

18 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

19 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

23 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago