ಪಿಯು ಪರೀಕ್ಷೆಯಲ್ಲಿ 96.17% ಅಂಕ ಪಡೆದ ಸರ್ಕಾರಿ‌ ಕಾಲೇಜಿನ ವಿದ್ಯಾರ್ಥಿನಿಗೆ ಜಿ ಆರ್ ಕೆ ಮೂರ್ತಿ ಟ್ರಸ್ಟ್ ವತಿಯಿಂದ ಸನ್ಮಾನ

ಪಿಯು ಪರೀಕ್ಷೆಯಲ್ಲಿ 96.17% ಅಂಕ ಪಡೆದ ಸರ್ಕಾರಿ‌ ಕಾಲೇಜಿನ ವಿದ್ಯಾರ್ಥಿನಿಗೆ ಜಿ ಆರ್ ಕೆ ಮೂರ್ತಿ ಟ್ರಸ್ಟ್ ವತಿಯಿಂದ ಸನ್ಮಾನ

ರಿಪ್ಪನ್‌ಪೇಟೆ : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಅಧ್ಬುತ ಸಾಧನೆ ಮಾಡಿದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕುಮಾರಿ ಜಯಶ್ರೀ ಪಿ ರವರಿಗೆ ಜಿಆರ್ ಕೆ ಮೂರ್ತಿ ಟ್ರಸ್ಟ್ ಹಾಗೂ ಪೋಸ್ಟ್ ಮ್ಯಾನ್ ಸುದ್ದಿ ಬಳದಿಂದ ಸನ್ಮಾನಿಸಿ ಗೌರವಿಸಲಾಯಿತು.




ಪಟ್ಟಣದ ಶಿವಮೊಗ್ಗ ರಸ್ತೆಯ ಜಯಪ್ರಕಾಶ್ ಹೊಟೇಲ್ ಮಾಲೀಕರಾದ ಪಾಂಡುರಂಗ ಮತ್ತು ನಿರ್ಮಲ ದಂಪತಿಗಳ ಪುತ್ರಿಯಾದ ಜಯಶ್ರೀ ಪಿ ವಿಜ್ಞಾನ ವಿಭಾಗದಲ್ಲಿ ತಾಲೂಕಿನಲ್ಲಿಯೇ ಅತಿ ಹೆಚ್ಚು ಅಂಕ ಗಳಿಸಿದ್ದಾಳೆ.

ಕುಮಾರಿ ಜಯಶ್ರೀ ಸರ್ಕಾರಿ ಕಾಲೇಜಿನಲ್ಲಿ ಓದಿ ಯಾವುದೇ ಟ್ಯೂಷನ್ ಮತ್ತು ಕೋಚಿಂಗ್ ಕ್ಲಾಸ್ ಗಳನ್ನು ಪಡೆಯದೇ ವಿಜ್ಞಾನ ವಿಭಾಗದಲ್ಲಿ 600ಕ್ಕೆ 577 ಅಂಕ ಪಡೆಯುವ ಮೂಲಕ ಸರ್ಕಾರಿ ಕಾಲೇಜು ಎಂದು ಮೂಗು ಮುರಿಯುವಂತಹ ಪೋಷಕರುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸೆಡ್ಡು ಹೊಡೆಯುವುದರ ಮೂಲಕ ಸಾಧಿಸುವ ಛಲವೊಂದಿದ್ದರೆ ಅಸಾಧ್ಯವಾದುದು ಯಾವುದು ಇಲ್ಲ ಸಾಬೀತುಪಡಿಸಿದ್ದಾಳೆ.


ಈ ಸಂಧರ್ಭದಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳದೊಂದಿಗೆ ಮಾತನಾಡಿದ ಕು|| ಜಯಶ್ರೀ ಪೋಷಕರ ಹಾಗೂ ಪ್ರಾಚಾರ್ಯರು ಮತ್ತು ಉಪನ್ಯಾಸಕರ ಸಹಕಾರ, ಮಾರ್ಗದರ್ಶನದಿಂದ ಉತ್ತಮ ಅಂಕಗಳನ್ನು ಗಳಿಸಲು ಸಾಧ್ಯವಾಯಿತು.ಗ್ರಾಮೀಣ ಪ್ರದೇಶದ ಕನ್ನಡ ಮಾದ್ಯಮದಲ್ಲಿ ಓದಿದ ವಿದ್ಯಾರ್ಥಿಗಳು ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಲು ಹಿಂಜರಿಯುವ ಅವಶ್ಯಕತೆ ಇಲ್ಲ ಆಸಕ್ತಿಯಿಂದ ಸರಿಯಾಗಿ ಎಲ್ಲಾ ಪ್ರಾಯೋಗಿಕ ತರಗತಿಗಳಲ್ಲಿ ಕಡ್ಡಾಯವಾಗಿ ಹಾಜರಿದ್ದಲ್ಲಿ ಮನೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಕಠಿಣ ಶ್ರಮ ಪಡೆಯುವ ಅಗತ್ಯವಿಲ್ಲ ಎಂದು ಮುಂದೆ ಎಂಬಿಬಿಎಸ್ ಪದವಿ ಪಡೆದು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವ ಆಸಕ್ತಿ ಹೊಂದಿದ್ದೇನೆ ಎಂದು ತಿಳಿಸಿದರು.




ಈ ಸಂಧರ್ಭದಲ್ಲಿ ಜಿ ಆರ್ ಕೆ ಮೂರ್ತಿ ಟ್ರಸ್ಟ್ ನ ಜಿ ಆರ್ ಗೋಪಾಲಕೃಷ್ಣ ,ಹಿರಿಯ ಪತ್ರಕರ್ತರಾದ ಸಬಾಸ್ಟಿಯನ್ ಮ್ಯಾಥ್ಯೂಸ್‌, ಪೋಸ್ಟ್ ಮ್ಯಾನ್ ನ್ಯೂಸ್ ಸಂಪಾದಕ ರಫ಼ಿ ರಿಪ್ಪನ್‌ಪೇಟೆ ಹಾಗೂ ಟ್ರಸ್ಟ್ ನ ಪ್ರಮುಖರಾದ ಉಲ್ಲಾಸ್ , ರಮೇಶ್ ಫ್ಯಾನ್ಸಿ ,ಖಲೀಲ್ ,ಮಾಲತೇಶ್, ವಿಜಯ್ ಈಡಿಗ , ಗಣೇಶ್ ದೂನ,ಮಧುಸೂಧನ್ ಹಾಗೂ ಇನ್ನಿತರರಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

12 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

12 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

16 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

18 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

19 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago