ಶಿವಮೊಗ್ಗ ತಾಳಗುಪ್ಪ-ಬೆಂಗಳೂರು ರೈಲಿನ ಇಂಜಿನ್ ಇವತ್ತು ಭದ್ರಾವತಿ ಸಮೀಪ ಬೋಗಿಗಳಿಂದ ಕಳಚಿಕೊಂಡು ಮುಂದಕ್ಕೆ ಹೋಗಿತ್ತು. ಭದ್ರಾವತಿ ತಾಲೂಕು ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದಲ್ಲಿ ಈ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ತಾಳಗುಪ್ಪ – ಬೆಂಗಳೂರು ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು, (20652 – Talguppa Bangalore Intercity Sf Express) ನ ಇಂಜಿನ್ – ಬೋಗಿಗಳ ನಡುವೆ ಸಂಪರ್ಕ ಕಳೆದುಕೊಂಡಿದ್ದರಿಂದ ಘಟನೆ ಸಂಭವಿಸಿದೆ. ಘಟನೆಯಿಂದ ಕೆಲ ಸಮಯ ಪ್ರಯಾಣಿಕರು ಗೊಂದಲಕ್ಕೊಳಗಾಗಿದ್ದರು.
ತಾಳಗುಪ್ಪದಿಂದ ಶಿವಮೊಗ್ಗ ಮುಖ್ಯ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ ರೈಲು, ಬೆಳಿಗ್ಗೆ 7 ಗಂಟೆ 5 ನಿಮಿಷಕ್ಕೆ ಭದ್ರಾವತಿ ನಿಲ್ದಾಣದತ್ತ ಪ್ರಯಾಣ ಬೆಳೆಸಿತ್ತು. ಮಾರ್ಗಮಧ್ಯೆ ಬಿಳಕಿ ಸಮೀಪ ಏಕಾಏಕಿ ರೈಲ್ವೆ ಎಂಜಿನ್ ಬೋಗಿಗಳ ಬಿಟ್ಟು ಮುಂದಕ್ಕೆ ಚಲಿಸಿದೆ. ಕೊಂಚ ದೂರ ಕ್ರಮಿಸಿದ ನಂತರ ಎಂಜಿನ್ ನನ್ನು, ಲೋಕೋ ಪೈಲೆಟ್ ನಿಲ್ಲಿಸಿದ್ದಾರೆ.
ಇನ್ನೂ ವಿಷಯ ತಿಳಿಯುತ್ತಿದ್ದಂತೆ ಭದ್ರಾವತಿ ಹಾಗೂ ಶಿವಮೊಗ್ಗದ ರೈಲ್ವೆ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಎಂಜಿನ್ ಹಾಗೂ ಬೋಗಿ ನಡುವೆ ಸಂಪರ್ಕ ಕಲ್ಪಿಸಿದ್ದಾರೆ. ನಂತರ ರೈಲು ಭದ್ರಾವತಿಯತ್ತ ಪ್ರಯಾಣ ಬೆಳೆಸಿದೆ.ತದನಂತರ ಭದ್ರಾವತಿ ನಿಲ್ದಾಣದಲ್ಲಿ ಹೆಚ್ಚುವರಿ ದುರಸ್ತಿ ಕಾರ್ಯ ನಡೆಸಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್