ಶಿವಮೊಗ್ಗದ ಗ್ರಾಮಾಂತರ ವ್ಯಾಪ್ತಿಯ ಪಿಳ್ಳಂಗೆರೆ ಬಳಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿ ಶಾಲಾ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ.
ಹೊಳೆಹೊನ್ನೂರು ಕಡೆಯಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ಬರುತ್ತಿದ್ದ ಬೈಕ್ ಗೆ ಶಿವಮೊಗ್ಗದಿಂದ ಹೊಳೆಹೊನ್ನೂರು ಕಡೆ ಹೋಗುತ್ತಿದ್ದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.
ಈ ಅಪಘಾತದಲ್ಲಿ ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಐಶ್ವರ್ಯ (15) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬಾಲಕಿಯ ತಲೆಯ ಮೇಲೆ ಟಿಪ್ಪರ್ ಲಾರಿಯ ಚಕ್ರ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.ಬೈಕ್ ಚಲಾಯಿಸುತಿದ್ದ ಬಾಲಕಿಯ ತಂದೆಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.