ರಿಪ್ಪನ್‌ಪೇಟೆ : ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಸಮಾಲೋಚನೆ|BJP

ರಿಪ್ಪನ್‌ಪೇಟೆ : ಇತ್ತೀಚೆಗೆ ನಡೆದ ವಿಧಾನಸಭಾ ಸಾವತ್ರಿಕ ಚುನಾವಣೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಕಷ್ಟು ಆಭಿವೃದ್ದಿ ಕಾಮಗಾರಿಗಳು ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಅನುಷ್ಟಾನಗೊಳಿಸಲಾಗಿದ್ದರೂ ಕೂಡಾ ಕ್ಷೇತ್ರದಲ್ಲಿ ಪಕ್ಷದ ಹಿನ್ನಡೆಗೆ ಕಾರಣವೇನು ಎಂಬುದರ ಕುರಿತು ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಪರಾಮರ್ಶೆ ನಡೆಸಿದರು.




ಪಟ್ಟಣದ ವಿನಾಯಕ ವೃತ್ತದಲ್ಲಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನೆಡಸಿ ಮುಂದಿನ ಜಿಲ್ಲಾ ತಾಲ್ಲೂಕ್ ಪಂಚಾಯ್ತಿ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಅಕಾಂಕ್ಷಿಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಿ ಕಾರ್ಯಕರ್ತರು ಮತದಾರರೊಂದಿಗೆ ಇಂದಿನಿಂದಲೇ ಬಿಜೆಪಿ ಪಕ್ಷದ ಕಾರ್ಯಗಳ ಕುರಿತು ಮನವರಿಕೆ ಮಾಡುವಂತೆ ತಿಳಿಸಿದರು.




ಈ ಸಂದರ್ಭದಲ್ಲಿ ಮೆಣಸೆ ಆನಂದ, ಎಂ.ಸುರೇಶ್‌ಸಿಂಗ್,ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ,ಜಿ.ಪಂ ಮಾಜಿ ಸದಸ್ಯೆ ಎ.ಟಿ.ನಾಗರತ್ನ ,ಪಕ್ಷದ ಮುಖಂಡರಾದ ಎನ್.ಸತೀಶ್,ಗ್ರಾ.ಪಂ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್,ತರಕಾರಿ ಯೋಗೇಂದ್ರಗೌಡ , ಪಿ.ರಮೆಶ್, ಪರಮೇಶ ಹೊನ್ನಕೊಪ್ಪ,ಮಹೇಶ್, ಸಾಜಿ,ರಾಮಚಂದ್ರ,ಉದ್ಯಮಿ ಎಲ್.ನಾಗರಾಜ್ ಶೆಟ್ಟಿ,ಸುಂದರೇಶ್ ಇನ್ನಿತರರು ಹಾಜರಿದ್ದರು.

“ಅಪಘಾತದಲ್ಲಿ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿ ವೈಯಕ್ತಿಕ ನೆರವು ನೀಡಿದ ಮಾಜಿ ಸಚಿವ ಹರತಾಳು’’

ಇತ್ತೀಚೆಗೆ ಅಪಘಾತದಲ್ಲಿ ಗಾಯಗೊಂಡ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಾಣಬೈಲು ಯೋಮಕೇಶ್ ಪತ್ನಿ ಮತ್ತು ಸಿದ್ದಪ್ಪವನರ ಪತ್ನಿ ರವರ ಮನೆಗೆ ಕ್ಷೇತ್ರದ ಮಾಜಿ ಶಾಸಕ ಹರತಾಳು ಹಾಲಪ್ಪ ಭೇಟಿ ನೀಡಿ ಆರೋಗ್ಯದ ಸ್ಥಿತಿಯನ್ನು ವಿಚಾರಿಸಿ ವೈಯಕ್ತಿಕ ನೆರವು ನೀಡಿ ಬೇಗ ಗುಣಮುಖ ಹೊಂದಲೇದು ಹಾರೈಸಿದರು.




ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾದ ರಿಪ್ಪನ್‌ಪೇಟೆ ಗವಟೂರು ಗ್ರಾಮದ ಪಿ.ಸುದೀಂದ್ರರ ಮನೆಗೆ ಕ್ಷೇತ್ರದ ಮಾಜಿ ಶಾಸಕ ಹರತಾಳು ಹಾಲಪ್ಪ ಭೇಟಿ ನೀಡಿ ಆರೋಗ್ಯದ ಸ್ಥಿತಿಯನ್ನು ವಿಚಾರಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

12 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

13 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

13 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

18 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

19 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

2 days ago