ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ – ಹರತಾಳು ಹಾಲಪ್ಪ|Bjp

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ

ರಿಪ್ಪನ್‌ಪೇಟೆ;-ಸಮಾಜವಾದಿ ನೇತಾರ ವರ್ಣರಂಜಿತ ನಾಯಕ ಎಸ್.ಬಂಗಾರಪ್ಪನವರು ನಿಧನದ ಕುರಿತು ವಿಧಾನಸೌಧದಲ್ಲಿ ಅಯೋಜಿಸಲಾದ ಸಂತಾಪ ಸಭೆಯಲ್ಲಿ ಅವಕಾಶವನ್ನು ನೀಡಲಾದರೂ ಕೂಡಾ ಬಂಗಾರಪ್ಪನವರ ಬಗ್ಗೆ ಗುಣಗಾನ ಮಾಡದವರು ಮಾನಸಪುತ್ರರಾಗಲು ಹೇಗೆ ಸಾಧ್ಯವೆಂದು ಶಾಸಕ ಹರತಾಳು ಹಾಲಪ್ಪ ಹೆಸರು ಹೇಳದೆ ಪರೋಕ್ಷವಾಗಿ ವ್ಯಂಗ್ಯವಾಡಿದರು.


ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಕಳೆದ ಐದು ವರ್ಷದ ಅವಧಿಯಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅಭಿವೃದ್ದಿ ಕಾರ್ಯಗಳಿಗಾಗಿ 36 ಕೋಟಿ ಅನುದಾನವನ್ನು ತಂದಿರುವುದಾಗಿ ವಿವರಿಸಿ ಈ ಹಿಂದೆ 10 ವರ್ಷದ ಅವಧಿಯಲ್ಲಿ ಶಾಸಕರಾಗಿದ್ದವರು ಎಷ್ಟು ಅನುದಾನ ತಂದಿದ್ದಾರೆಂದು ಪ್ರಶ್ನಿಸಿ ಈಗಾಗಲೇ ನಾನು ಚುನಾವಣೆಯ ಸಂದರ್ಭದಲ್ಲಿ ರಿಪ್ಪನ್‌ಪೇಟೆಯ ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ವಿನಾಯಕ ವೃತ್ತದಿಂದ ತಲಾ ಒಂದು ಕಿ.ಮೀ. ಡಬಲ್ ರಸ್ತೆ ನಿರ್ಮಿಸುವ ಭರವಸೆ ನೀಡಿದ್ದು ಅದರಂತೆ ಸಾಗರ ರಸ್ತೆಯಲ್ಲಿ ಡಬಲ್ ರಸ್ತೆ ಕಾಮಗಾರಿಗೆ ಹಣ ಬಿಡುಗಡೆಯಾಗಿದ್ದು ಕಾಮಗಾರಿ ಸಹ ಆರಂಭವಾಗಿದೆ ಉಳಿದ ಇನ್ನೂ ಮೂರು ರಸ್ತೆಗಳನ್ನು ಮುಂಬರುವ ದಿನಗಳಲ್ಲಿ ಪೂರ್ಣಗೊಳಿಸುವ ಬಗ್ಗೆ ಸರ್ಕಾರದಿಂದ ಅನುದಾನ ತರುವುದರೊಂದಿಗೆ ಪಳಪಳ ಹೊಳೆಯುವಂತೆ ಮಾಡಲು ನನಗೆ ಮತ ನೀಡಿ ಎಂದು ಮನವಿ ಮಾಡಿದರು.




ಶರಾವತಿ ಮುಳುಗಡೆ ಸಂತ್ರಸ್ತರ ಮತ್ತು ಬಗರ್‌ಹುಕುಂ ಸಾಗುವಳಿ ರೈತರ ಸಮಸ್ಯೆಗೆ ಶಾಸನ ಸಭೆಯ ಒಳಗೆ ಮತ್ತು ಹೊರಗೆ ಹೋರಾಟ ಮಾಡುವುದರೊಂದಿಗೆ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುವವರ ಪರ ಕಾಗೋಡು ಹೋರಾಟದಂತೆ ಉಳುವವನೆ ಹೊಲದೊಡೆಯ ತತ್ವ ಸಿದ್ದಾಂತದAತೆ ಹೋರಾಟ ನಡೆಸಿ ಶಾಶ್ವತ ಪರಿಹಾಕ ಕೊಡಿಸಲು ನನಗೆ ಈ ಭಾರಿ ಮತ ಕೊಡಿ ಎಂದ ಹೇಳಿ ಬಿಜೆಪಿ ಬಡವರ ದೀನದಲಿತ ಪರವಾದ ಪಕ್ಷವಾಗಿದೆ ಬಿ.ಎಸ್.ಯಡಿಯೂರಪ್ಪನವರ ಕನಸು ನನಸು ಮಾಡಲು ಬಿಜೆಪಿ ಪಕ್ಷವನ್ನು ಬೆಂಬಲಿಸಿ ಎಂದರು.

ಹೊಸನಗರ ತಾಲ್ಲೂಕಿನ ವೀರಶೈವ ಸಮಾಜಕ್ಕೆ 8 ಕೋಟಿ ನಾರಾಯಣಗುರು ಮಠಕ್ಕೆ 10 ಕೋಟಿ ಹಾಗೂ 600 ಕ್ಕೂ ಅಧಿಕ ದೇವಸ್ಥಾನಗಳ ಅಭಿವೃದ್ದಿ ಹಾಗೂ 880 ಗ್ರಾಮೀಣ ರಸ್ತೆಗಳಿಗೆ ಹಾಗೂ ಸೇತುವೆ ಕಾಲುಸಂಕ ಹೀಗೆ ಹಲವು ಅಭಿವೃದ್ದಿ ಕಾರ್ಯಗಳಿಗೆ ಜಾತಿ ಬೇದ ಭಾವ ತೊರದೆ ಎಲ್ಲರಿಗೂ ಸಮಾನತೆ ನೀಡಿ ಹೆಚ್ಚಿನ ಅನುದಾನ ನೀಡಲಾಗಿದೆ ಎಂದು ಸಭೆಯಲ್ಲಿ ವಿವರಿಸಿದರು.


ಸಂಸದ ಬಿ.ವೈ.ರಾಘವೇಂದ್ರ  ಆಭ್ಯರ್ಥಿ ಪರ ಮತಯಾಚಿಸಿ ಸಾಗರ ಕ್ಷೇತ್ರದಲ್ಲಿನ ಹಲವು ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಹರತಾಳು ಹಾಲಪ್ಪ ಶ್ರಮಿಸಿದ್ದಾರೆ.ಈ ಭಾರಿಯಲ್ಲಿ ಅವರನ್ನು ಗೆಲಿಸುವುದರಿಂದ ಇನ್ನೂ ಹೆಚ್ಚಿನ ಅಭಿವೃದ್ದಿಯಾಗುವುದರೊಂದಿಗೆ ಬಗರ್ ಹುಕುಂ ಸಮಸ್ಯೆ ಅರಣ್ಯ ಒತ್ತುವರಿದಾರರ ಸಮಸ್ಯೆಗೆ ಶಾಸನ ಸಭೆಯಲ್ಲಿ ದ್ವನಿ ಎತ್ತುವುದರೊಂದಿಗೆ ಶಾಶ್ವತ ಪರಿಹಾರ ಕಲ್ಪಿಸುವರೆಂದು ಹೇಳಿ ಮೇ. 10 ರಂದು ನಡೆಯುವ ಚುನಾವಣೆಯಲ್ಲಿ ಕಮಲದ ಚಿಹ್ನೆಗೆ ಮತ ನೀಡುವಂತೆ ಮನವಿ ಮಾಡಿದರು.




ಸಭೆಯಲ್ಲಿ ಮಾಜಿ ಶಾಸಕ ಬಿ.ಸ್ವಾಮಿರಾವ್, ಎ.ಟಿ.ನಾಗರತ್ನಮ್ಮ, ಸುರೇಶ್‌ಸ್ವಾಮಿರಾವ್,ಬಿಜೆಪಿಮುಖಂಡರಾದ ಡಾ.ರಾಜಾನಂದಿನಿ,ತಲ್ಲೂರು ರಾಜು,ಕೆರೆಕೈ ಪ್ರಸನ್ನ,ಗಣಪತಿಬೆಳಗೋಡು, ಎಂ.ಬಿ.ಮಂಜುನಾಥ,ಮಂಜುಳಕೇತಾರ್ಜಿರಾವ್, ಬಿ.ಯುವರಾಜ್, ವೀರೇಶ್‌ಅಲುವಳ್ಳಿ,ಬೆಳ್ಳೂರು ತಿಮ್ಮಪ್ಪ,ಹೊನಗೋಡು ರತ್ನಾಕರ್,ಸುರೇಶ್‌ಸಿಂಗ್,ಇನ್ನಿತರ ಪಕ್ಷದ ಮುಖಂಡರು ಹಾಜರಿದ್ದರು.

ಬಿಜೆಪಿ ಬೈಕ್ ರ‍್ಯಾಲಿ

ಬಹಿರಂಗ ಸಭೆಗೂ ಮುನ್ನ ರಿಪ್ಪನ್‌ಪೇಟೆಯ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯಮಂದಿರದ ಬಳಿಯಿಂದ ಸಾವಿರಾರು ಬೈಕ್‌ಗಳಲ್ಲಿ ಕಾರ್ಯಕರ್ತರು ನಾಲ್ಕು ರಸ್ತೆಯಲ್ಲಿ ಬೈಕ್ ರ‍್ಯಾಲಿ ನಡೆಸಿದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

12 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

13 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

13 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

18 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

19 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

2 days ago