ಶಿವಮೊಗ್ಗ : ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 1 ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ರವರು ನಡೆಸಿದ ರೋಡ್ ಶೋ ನಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದಾರೆ ಎಂದು ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದಾರೆ.
ಅಮಿತ್ ಶಾ ರವರು ರೋಡ್ ಶೋ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದಿಂದ ನೆಹರು ರಸ್ತೆಯ ಮೂಲಕ ಲಕ್ಷ್ಮೀ ಟಾಕೀಸ್ ವೃತ್ತದವರೆಗೂ ರೋಡ್ ಶೋ ನಡೆಸಲಾಗಿತ್ತು. ರೋಡ್ ಶೋನಲ್ಲಿ ಮಕ್ಕಳನ್ನು ಬಳಸಿಕೊಳ್ಳಲಾಗಿದೆ ಎಂದು ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಜೆಡಿಎಸ್ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ವಿರುದ್ಧ ಸಹ ದೂರು :
ವಿಧಾನಸಭಾ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯವರು ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆ ಫೆಯಿಂಗ್ ಸ್ಕ್ಯಾಡ್ ತಂಡದವರು ದೂರು ನೀಡಿದ್ದರು. ಈ ದೂರಿನ ಅನ್ವಯ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ 1986 ಅಡಿ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.