Headlines

ಶಿವಮೊಗ್ಗ ಮೂಲದ ಮಹಿಳೆ ನಾಪತ್ತೆ|missing

ಶಿವಮೊಗ್ಗ ಮೂಲದ ಕೆ.ಶುಭಾ ಎಂಬವರು ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.

ಈಕೆ ಬಹರೈನ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಅಲ್ಲಿಂದ ತಮ್ಮ ಗಂಡನ ಮನೆ ಇರುವ ಉಡುಪಿ ಜಿಲ್ಲೆಯ ಗೋಪಾಲಪುರಕ್ಕೆ ಬಂದಿದ್ದರು. ಆನಂತರ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋಗಿದ್ದಾರೆ ಆ ಬಳಿಕ ನಾಪತ್ತೆಯಾಗಿದ್ದಾರೆ.




ಇವರ ಗುರುತು 5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು ಕನ್ನಡ, ಮರಾಠಿ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಮಾತ ನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿ ಸಂಪರ್ಕಿಸಲು ಸೂಚಿಸಲಾಗಿದೆ. ಅಲ್ಲದೆ ಕಾಣೆಯಾದವರ ಬಗ್ಗೆ ಪ್ರಕಟಣೆಯನ್ನು ಹೊರಡಿಸಲಾಗಿದೆ.





About The Author

Leave a Reply

Your email address will not be published. Required fields are marked *

Exit mobile version