ಶಿವಮೊಗ್ಗ : ಸಲೂನ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಸಲೂನ್ ಮಾಲೀಕರನ್ನು ಬಂಧಿಸಿ, 6 ಜನ ಮಹಿಳೆಯರನ್ನು ಮಹಿಳಾ ಪೊಲೀಸರು ರಕ್ಷಿಸಿ, ದಂಧೆ ನಡೆಸುತ್ತಿದ್ದ ಆರೋಪಿ ದಂಪತಿಯನ್ನು ಬಂಧಿಸಲಾಗಿದೆ.
ನಗರದ ಕುವೆಂಪು ರಸ್ತೆಯ ಸಾಯಿ ಆರ್ಕೇಡ್ ಕಟ್ಟಡದ ರಾಯಲ್ ಆರ್ಚ್ ಫ್ಯಾಮಿಲಿ ಸಲೂನ್ ಮತ್ತು ಸ್ಪಾನಲ್ಲಿ ಸ್ಪಾ ಹೆಸರಿನಲ್ಲಿ ಮಹಿಳೆಯನ್ನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಮಹಿಳಾ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಸ್ಪಾ ನಲ್ಲಿ 6 ಜನ ಯುವತಿಯರನ್ನು ರಕ್ಷಿಸಿದ್ದಾರೆ.
ರಕ್ಷಿಸಲಾದ 6 ಜನ ಮಹಿಳೆಯರಿಗೆ ಸ್ಪಾ ಮಾಲೀಕರಾದ ಗೋಪಾಲ್ ವೈ ಮತ್ತು ವಿದ್ಯಾಶ್ರೀ ಅವರು ಹಣದ ಆಮಿಷ ತೋರಿಸಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿಕೊಂಡಿದ್ದರು. ರಕ್ಷಿಸಲ್ಪಟ್ಟ ಎಲ್ಲಾ ಮಹಿಳೆಯರು ಬೇರೆ ಬೇರೆ ರಾಜ್ಯದವರು ಎಂದು ತಿಳಿದು ಬಂದಿದೆ.
ರಾಯಲ್ ಆರ್ಚ್ ಫ್ಯಾಮಿಲಿ ಸಲೂನ್ ಮತ್ತು ಸ್ಪಾ 15 ದಿನದ ಹಿಂದೆ ಪ್ರಾರಂಭವಾಗಿತ್ತು. ಸ್ಪಾ ಪ್ರಾರಂಭದಿಂದಲೂ ಅನುಮಾನಾಸ್ಪದವಾಗಿ ನಡೆದುಕೊಳ್ಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ದಂಧೆ ಕುರಿತು ಬಂದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ಈ ಕುರಿತು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿತ ದಂಪತಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.