ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ ಧರ್ಮಪ್ಪ ರವರ ಆರೋಗ್ಯವನ್ನು ಮಾಜಿ ಸಚಿವ ಹರತಾಳು ಹಾಲಪ್ಪ ವಿಚಾರಿಸಿದರು.
ಇಂದು ರಾಮಯ್ಯ ಆಸ್ಪತ್ರೆಗೆ ತೆರಳಿ ಮಾಜಿ ಶಾಸಕ ಬಿ ಧರ್ಮಪ್ಪರವ ಆರೋಗ್ಯವನ್ನು ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ಮಾಜಿ ಶಾಸಕ ಬಿ ಧರ್ಮಪ್ಪ ರವರು 1985 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎಲ್ ಟಿ ತಿಮ್ಮಪ್ಪ ರವರ ವಿರುದ್ದ 1500 ಮತಗಳ ಅಂತರದಿಂದ ಜಯಗಳಿಸಿದ್ದರು.
ಸಾಗರ ತಾಲೂಕಿನ ತಂಗಳವಾಡಿಯ ಬಿ ಧರ್ಮಪ್ಪ ಪ್ರಸ್ತುತ ಹಾಗೂ ಕುಟುಂಬ ಬೆಂಗಳೂರಿನಲ್ಲಿ ವಾಸವಿದ್ದಾರೆ.
ಆರೋಗ್ಯದ ವ್ಯತ್ಯಯ ಉಂಟಾದ ಹಿನ್ನಲೆಯಲ್ಲಿ ಮಾಜಿ ಶಾಸಕ ಬಿ ಧರ್ಮಪ್ಪ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್